ಮಡಿಕೇರಿ: ಇಲ್ಲಿನ ಬಸವೇಶ್ವರ ದೇಗುಲದಲ್ಲಿ ಅಕ್ಕಮಹಾದೇವಿ ಜಯಂತಿ ಮತ್ತು ಸಿದ್ಧಗಂಗಾ ಮಠದ ಶಿವಕುಮಾರಸ್ವಾಮೀಜಿ ಅವರ ಜನ್ಮದಿನಾಚರಣೆಗಳನ್ನು ಗುರುವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಇಲ್ಲಿನ ಮಹದೇವಪೇಟೆಯ ಅಕ್ಕನಬಳಗದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ 50ಕ್ಕೂ ಅಧಿಕ ಭಕ್ತರು ಭಾಗಿಯಾಗಿದ್ದರು.

ಅಕ್ಕಮಹಾದೇವಿ ಮತ್ತು ಶಿವಕುಮಾರಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ರುದ್ರಾಭಿಷೇಕ, ವಿಶೇಷ ಅಲಂಕಾರ, ಪುಷ್ಪಾರ್ಚನೆ, ಮಹಾನೈವೇದ್ಯ ಮತ್ತು ಮಹಾಮಂಗಳಾರತಿಗಳು ನೆರವೇರಿದವು. ತೀರ್ಥ ಪ್ರಸಾದ ವಿನಿಯೋಗ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಬಸವೇಶ್ವರ ದೇಗುಲದ ಆಡಳಿತ ಮಂಡಳಿಯವರು ಹಾಗೂ ಅಕ್ಕನ ಬಳಗದ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಕ್ಕಮಹಾದೇವಿ ಮತ್ತು ಶಿವಕುಮಾರಸ್ವಾಮೀಜಿ ಅವರ ಕುರಿತು ವಿಶೇಷ ಉಪನ್ಯಾಸಗಳು ಜರುಗಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-51-1917441767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.