ಮಡಿಕೇರಿ: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮಡಿಕೇರಿ ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯದೆ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗಿದೆ. ರಾಜ್ಯದಲ್ಲಿ ಶೀಘ್ರ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದರೂ ಚುನಾವಣೆ ನಡೆಸಲು ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು. ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡುತ್ತಲೇ ಇದೆ ಎಂದು ಕಿಡಿಕಾರಿದರು.

ಈ ಮೂಲಕ ಅಧಿಕಾರ ವಿಕೇಂದ್ರೀಕರಣವನ್ನು ಹಾಗೂ ಪ್ರಜಾಪ್ರಭುತ್ವವನ್ನು ಹತ್ತಿಕ್ಕುತ್ತಿದೆ ಎಂದು ದೂರಿದ ಅವರು ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ, ಚುನಾವಣೆ ನಡೆಸಲು ಸೂಚಿಸಬೇಕು ಎಂದರು.

ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪಕ್ಷದ ವಕ್ತಾರ ತಳೂರು ಕಿಶೋರ್ ಕುಮಾರ್, ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎ ಹರೀಶ್, ಮುಖಂಡರಾದ ಕಾಂಗಿರ ಸತೀಶ್, ಬಿ.ಕೆ. ಜಗದೀಶ್, ಡೀನ್ ಬೋಪಣ್ಣ, ಬೊಳ್ಳಜಿರ ಅಯ್ಯಪ್ಪ, ಗಿರೀಶ್, ಯುವ ಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ, ಕೃಷಿಕ ಸಮಾಜದ ನಿರ್ದೇಶಕ ಕಾರ್ಯಪ್ಪ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಕುಮುದ ರಶ್ಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-51-1931503149

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.