ಮಡಿಕೇರಿ: ರೋಟರಿ ಮಡಿಕೇರಿ ವತಿಯಿಂದ ಮೂರ್ನಾಡು ಎಜುಕೇಷನ್ ಟ್ರಸ್ಟ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಿಸಲಾಯಿತು.

ಗರ್ಭಕಂಠದ ಕ್ಯಾನ್ಸರ್ ಕುರಿತು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ 13 ವಿದ್ಯಾರ್ಥಿನಿಯರು ಲಸಿಕೆ ಪಡೆದುಕೊಂಡರು.

ಲಸಿಕೆ ನೀಡಿ ಮಾತನಾಡಿದ ಸ್ತ್ರೀರೋಗ ತಜ್ಞೆ ಡಾ.ಸುಮಂಗಲಿ, ‘ಇತ್ತೀಚಿನ ದಿನಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುತ್ತಿದ್ದು, ಜಾಗೃತಿ ಅಗತ್ಯವಾಗಿದೆ. 9 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಎಚ್ಪಿವಿ ಲಸಿಕೆ ನೀಡಲಾಗುತ್ತಿದೆ. ಈ ರೋಗದ ಬಗ್ಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸುವ ಅನಿವಾರ್ಯತೆ ಇದೆ’ ಎಂದರು.

ಕಳೆದ ವರ್ಷ ರೋಟರಿ ವತಿಯಿಂದ 51 ವಿದ್ಯಾರ್ಥಿನಿಯರಿಗೆ ಎಚ್ಪಿವಿ ಲಸಿಕೆ ನೀಡಲಾಗಿತ್ತು. ಈ ಬಾರಿ 250 ವಿದ್ಯಾರ್ಥಿನಿಯರಿಗೆ ನೀಡುವ ಗುರಿ ಹೊಂದಲಾಗಿದೆ. 13 ವಿದ್ಯಾರ್ಥಿನಿಯರು ಸ್ವಯಂ ಇಚ್ಛೆಯಿಂದ ಲಸಿಕೆ ಪಡೆದುಕೊಂಡಿದ್ದಾರೆ. ಸರ್ಕಾರದಿಂದ ಲಸಿಕೆ ನೀಡುವ ಯೋಜನೆಯ ಮೂಲಕ ಲಸಿಕೆ ಪಡೆದುಕೊಳ್ಳುವ ಇಂಗಿತವನ್ನು ಇತರ ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದರು.

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ರೋಟರಿ ಸಂಸ್ಥೆ ನಿರಂತರವಾಗಿ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುತ್ತಿದೆ. ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಈಚೆಗೆ ಮೂರ್ನಾಡು ಎಜುಕೇಷನ್ ಟ್ರಸ್ಟ್ ವಿದ್ಯಾ ಸಂಸ್ಥೆಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಚ್ಪಿವಿ ಲಸಿಕೆ ಕುರಿತು ಡಾ.ಸುಮಂಗಲಿ ಅವರು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದ್ದರು.

ರೋಟರಿ ಮಡಿಕೇರಿ ಅಧ್ಯಕ್ಷೆ ಲಲಿತಾ ರಾಘವನ್, ಸಮುದಾಯ ಸೇವಾ ವಿಭಾಗದ ನಿರ್ದೇಶಕ ಸುದಯ್ ನಾಣಯ್ಯ, ಮಲ್ಲಿಗೆ ಪೈ, ಡಾ.ಸುಮಂಗಲಿ ಅವರ ನೇತೃತ್ವದಲ್ಲಿ ಆರೋಗ್ಯ ಸಿಬ್ಬಂದಿಗಳು, ವಿದ್ಯಾ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕೂಡ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗರ್ಭಕಂಠದ ಕ್ಯಾನ್ಸರ್ ಕುರಿತು ಮಾಹಿತಿ ಪಡೆದುಕೊಂಡರು ಎಂದು ಪ್ರಕಟನೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-51-1783477867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.