ಮಡಿಕೇರಿ: ಮಡಿಕೇರಿ ದಸರೆ ಅಂಗವಾಗಿ ಇಲ್ಲಿನ ಗಾಂಧಿ ಮೈದಾನದಲ್ಲಿ ಸೆ.24 ರಂದು ಕಾಫಿ ದಸರೆ ನಡೆಯಲಿದ್ದ, ಇದಕ್ಕಾಗಿ 45 ಮಳಿಗೆಗಳು ನಿರ್ಮಾಣವಾಗಿವೆ.

ಈ ಮಳಿಗೆಗಳಲ್ಲಿ ಕಾಫಿ ಕೃಷಿ ಸಂಬಂಧಿತ ಮತ್ತು ಕೆಫೆ ಹಾಗೂ ಇತರೆ ಕಾಫಿ ಮೌಲ್ಯವರ್ಧಿತ ಉತ್ಪನ್ನಗಳು ಇರಲಿವೆ.

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗ ನೀಡಿರುವ ಕಾಫಿ ದಸರೆಯನ್ನು ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ದೇವವೃಂದ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಡಾ.ಮಂತರ್ಗೌಡ ವಹಿಸಲಿದ್ದಾರೆ. ಮುಖ್ಮಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟರಾಜಾ, ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ನಂದಾಬೆಳ್ಯಪ್ಪ, ಮಹಿಳಾ ಕಾಫಿ ಜಾಗೖತಿ ಸಂಘದ ಅಧ್ಯಕ್ಷೆ ಜ್ಯುತಿಕಾ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.

ಕಾಫಿ ಕುರಿತು ಉಪನ್ಯಾಸ

ಕಾಫಿ ಬೆಳೆ ಕುರಿತು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಪನ್ಯಾಸ ನಡೆಯಲಿದೆ. ಭಾರತೀಯ ಕಾಫಿ ಮಂಡಳಿಯ ಗುಣಮಟ್ಟ ವಿಭಾಗದ ನಿರ್ದೇಶಕ ಡಾ.ಐಚೆಟ್ಟೀರ ಮಂದಪ್ಪ ‘ಕಾಫಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಿಕೆ’ ವಿಚಾರ ಕುರಿತು, ಸಕಲೇಶಪುರದ ಪ್ರಗತಿಪರ ಕೃಷಿಕ ಕರಣ್ ಅವರು ‘ಕಾಫಿ ಕೃಷಿಯಲ್ಲಿ ಇತ್ತೀಚಿನ ಹೊಸ ತಳಿಗಳು’ ಕುರಿತು, ಕುಶಾಲನಗರದ ಪ್ರಗತಿಪರ ಕೃಷಿಕ ಜೆರ್ಮಿ ಡಿಸೋಜಾ ‘ರೋಬಸ್ಟಾ ಕಾಫಿಯಲ್ಲಿ ಕುಬ್ಜ ತಳಿ’ ಬಗ್ಗೆ, ಪಶುವೈದ್ಯ ಇಲಾಖೆಯ ಪಾಲಿ ಕ್ಲಿನಿಕ್ ಆಸ್ಪತ್ರೆಗಳ ಸಹಾಯಕ ನಿರ್ದೇಶಕ ಡಾ.ಚೇಂದ್ರಿಮಾಡ ಕ್ಯಾಪ್ಟನ್ ತಿಮ್ಮಯ್ಯ ಕಾಫಿ ಕೃಷಿಗೆ ಪೂರಕವಾದ ಮಣ್ಣಿನ ಫಲವತ್ತತೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಜಿಲ್ಲೆಯ 10 ಸಾಧಕ ಕೃಷಿಕರನ್ನು ಮಧ್ಯಾಹ್ನ 1 ಗಂಟೆಗೆ ಸನ್ಮಾನಿಸಲಾಗುತ್ತದೆ. ಬೆಟ್ಟಗೇರಿ ಎಸ್ಟೇಟ್ ಮಾಲೀಕ ವಿನೋದ್ ಶಿವಪ್ಪ, ಕಿರಗಂದೂರು ಗ್ರಾಮದ ಹಿರಿಯ ಕೃಷಿಕ ಎಸ್.ಎಂ.ಚಂಗಪ್ಪ, ಪ್ರಗತಿಪರ ಬೆಳೆಗಾರ ಲವ ಎಡದಂಟೆ, ಪೊನ್ನಂಪೇಟೆ ಹುದೂರು ಗ್ರಾಮದ ಸಾಧಕ ಕೃಷಿಕ ಬಿ.ಪಿ.ರವಿಶಂಕರ್, ಕೊಡ್ಲಿಪೇಟೆಯ ಕಾಫಿ ನರ್ಸರಿ ಮಾಲೀಕ ಡಿ.ವೈ.ರಜಾಕ್, ಹಿರಿಯ ಕಾಫಿ ಉದ್ಯಮಿ ಮಡಿಕೇರಿಯ ನಿಜಾಮುದ್ದೀನ್ ಸಿದ್ದಿಕಿ, ತಾಕೇರಿಯ ಸಿರಿ ಸ್ವಸಹಾಯ ಮಹಿಳಾ ಸಂಘ, ಕುಂದಗ್ರಾಮದ ಪ್ರಗತಿ ಪರ ಕೃಷಿಕ ಕೊಡಂದೇರ ನರೇನ್ ಕುಟ್ಟಯ್ಯ, ಚೆಟ್ಟಳ್ಳಿ ಪೊನ್ನತ್ತಮೊಟ್ಟೆಯ ಮಿಶ್ರಬೆಳೆ ಕೃಷಿಕ ರಾಬರ್ಟ್, ಪ್ರಗತಿ ಪರ ಕೃಷಿಕ ಶ್ರೀ ವಿಕ್ರಂ ಅವರನ್ನು ಸನ್ಮಾನಿಸಲಾಗುತ್ತದೆ.

ಕಾಫಿ ಖಾದ್ಯಗಳ ಸ್ಪರ್ಧೆ ಕೂಡ ನಡೆಯಲಿದೆ. ಕಾಫಿ ಮಂಡಳಿ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳು, ಕೊಡಗಿನಾದ್ಯಂತ 32 ಕಾಫಿ ಕೆಫೆಗಳೂ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತವೆ ಎಂದು ಕಾಫಿ ದಸರಾ ಸಂಚಾಲಕ ಎಚ್.ಟಿ.ಅನಿಲ್ ತಳಿಸಿದ್ದಾರೆ.

10 ಸಾಧಕರ ಕೃಷಿಕರಿಗೆ ಸನ್ಮಾನ ಹಲವು ವಿಷಯಗಳನ್ನು ಕುರಿತು ಉಪನ್ಯಾಸ ವೈವಿಧ್ಯಮವಾದ ಕಾರ್ಯಕ್ರಮಗಳ ಆಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.