ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ರಾಹುಲ್ ಗಾಂಧಿಗೆ ಕಿರುಕುಳ ಆರೋಪ; ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Last Updated 17 ಜೂನ್ 2022, 8:19 IST
ಅಕ್ಷರ ಗಾತ್ರ

ಮಡಿಕೇರಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಮುಖಂಡರಾದ ವೀಣಾ ಅಚ್ಚಯ್ಯ ಮಾತನಾಡಿ, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿ ಅವರಿಗೆ ವಿನಾ ಕಾರಣ ತೊಂದರೆ ಕೊಡುತ್ತಿದೆ. ಬಿಜೆಪಿ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಇಂತಹ ಹೇಯ ಕೃತ್ಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಜನರ ಗಮನ ಬೇರೆಡೆ ಸೆಳೆಯಲು ಪ್ರವಾದಿಗಳನ್ನು ನಿಂದಿಸುವುದು, ಮಸೀದಿಗಳಲ್ಲಿ ದೇಗುಲ ಇದೆ ಎಂದು ಹೇಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದೆಲ್ಲವೂ ಜನಸಾಮಾನ್ಯರಿಗೆ ತೊಂದರೆ ಕೊಡುವಂತಹ ಕೆಲಸ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರಿಗೆ ಮನವಿ‌ ಸಲ್ಲಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ‌ಧರ್ಮಜ ಉತ್ತಪ್ಪ, ಮುಖಂಡರಾದ ಮುನೀರ್ ಅಹಮ್ಮದ್, ಕೆ.ಕೆ.ಮಂಜುನಾಥ, ತನ್ನೀರ ಮೈನಾ, ಟಿ.ಪಿ.ರಮೇಶ್, ಮಿಥುನ್ ಗೌಡ, ನೆರವಂಡ ಉಮೇಶ್, ಸೂರಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT