ಮಡಿಕೇರಿ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳವಾರ ಕಾಂಗ್ರೆಸ್ನ ಕೊಡಗು ಜಿಲ್ಲಾ ಘಟಕ ಹಾಗೂ ಜಿಲ್ಲಾ ಘಟಕದ ಅಲ್ಪಸಂಖ್ಯಾತ ಘಟಕದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ನೂರಾರು ಮಂದಿ ಕಾರ್ಯಕರ್ತರು ಹಾಗೂ ಮುಖಂಡರು ಇಲ್ಲಿನ ಜಾಮೀಯ ಮಸೀದಿಯಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ‘ಮುಂದೆ ದೇಶದ ಯಾವುದೇ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಖಚಿತವಾಗಿದೆ. ಹಾಗಾಗಿಯೇ ಅದು ಅಲ್ಪಸಂಖ್ಯಾತರ ವಿರುದ್ಧದ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ’ ಎಂದು ಆರೋಪಿಸಿದರು.

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ. ಆದರೆ, ಕಾಂಗ್ರೆಸ್ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಸೌಲಭ್ಯಗಳನ್ನು ಬಿಜೆಪಿಯವರೂ ಪಡೆಯುತ್ತಿದ್ದಾರೆ ಎಂದರು.

ಶಾಸಕ ಡಾ.ಮಂತರ್ಗೌಡ ಮಾತನಾಡಿ, ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕಾನೂನು ಹೋರಾಟ ನಡೆಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ಜಾತಿ ಧರ್ಮದ ಬೇಧವಿಲ್ಲದೆ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ‘ಕೇಂದ್ರ ಸರ್ಕಾರ ಯಾವುದೇ ಚರ್ಚೆ ನಡೆಸದೇ ತರಾತುರಿಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಇದರ ವಿರುದ್ಧ ನಮ್ಮ ಪ್ರತಿಭಟನೆ ನಡೆಯುತ್ತಿದೆ. ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು’ ಎಂದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಮಾತನಾಡಿ, ‘ನಮ್ಮ ಹೋರಾಟ ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನೀತಿಯ ವಿರುದ್ಧ’ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅತ್ಯುತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ನಮ್ಮ ವಿರುದ್ಧವಾಗಿಯೇ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ತಾಲ್ಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.