ಮಡಿಕೇರಿ: ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಮತ್ತು ಪ್ರಾಮಾಣಿಕ ವ್ಯವಸ್ಥೆ ನಿರ್ಮಿಸಲು ಕೈಜೋಡಿಸಬೇಕು ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಹೇಳಿದರು.

ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ವತಿಯಿಂದ ಸುರಕ್ಷಿತ ಉತ್ಪನ್ನಗಳು ಆತ್ಮವಿಶ್ವಾಸದ ಗ್ರಾಹಕರು ಎಂಬ ವಿಷಯದಡಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿನ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಗ್ರಾಹಕರಾಗಿದ್ದು, ಗ್ರಾಹಕರ ಸುರಕ್ಷತೆ, ಮಾಹಿತಿ ಮತ್ತು ನ್ಯಾಯಸಮ್ಮತ ಸೇವೆ ದೊರಕುವುದು ಅತ್ಯಂತ ಅವಶ್ಯಕವಾಗಿದೆ ಎಂದರು.

ಹಿರಿಯ ವಕೀಲರಾದ ಎಂ.ಎ.ನಿರಂಜನ ಮಾತನಾಡಿ, ’ಗ್ರಾಹಕರ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ ಪ್ರಜ್ಞಾವಂತರಾಗಬೇಕು‘ ಎಂದರು.

ಯಾವುದೇ ಪದಾರ್ಥಗಳನ್ನು ಕೊಳ್ಳುವ ಸಂದರ್ಭದಲ್ಲಿ ಗುಣಮಟ್ಟ ಮತ್ತು ವಸ್ತುವಿನ ಅವಧಿಯನ್ನು ಗಮನಿಸಬೇಕು ಎಂದು ತಿಳಿಸಿದರು.

ಗ್ರಾಹಕರ ಹಕ್ಕುಗಳ ಬಗ್ಗೆ ಚ್ಯುತಿ ಬಂದಾಗ ಗ್ರಾಹಕರ ಆಯೋಗಕ್ಕೆ ಮನವಿ ಮಾಡಬೇಕು. ಹಾಗೆಯೇ ತಮ್ಮ ಕರ್ತವ್ಯಗಳನ್ನು ಸಹ ಮರೆಯಬಾರದು ಎಂದೂ ಅವರು ಕಿವಿಮಾತು ಹೇಳಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ ಮಾತನಾಡಿ, ’ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಜೊತೆಗೆ ಕರ್ತವ್ಯವನ್ನು ಪಾಲಿಸಬೇಕು‘ ಎಂದು ಹೇಳಿದರು.

ಪದಾರ್ಥಗಳನ್ನು ಕೊಳ್ಳುವಾಗ ತೂಕ ಮತ್ತು ಗುಣಮಟ್ಟ ಖಾತರಿಪಡಿಸಿಕೊಳ್ಳಬೇಕು. ಯಾವುದೇ ಒಂದು ವಸ್ತು ಕೊಳ್ಳುವಾಗ ರಶೀದಿ ಕಡ್ಡಾಯವಾಗಿ ಪಡೆಯಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಗ್ರಾಹಕ ಆಯೋಗವು ಸಲ್ಲಿಕೆಯಾಗುವ ದೂರು ಸಂಬಂಧ ಶೀಘ್ರ ವಿಚಾರಣೆ ನಡೆಸಿ ಪರಿಹಾರ ಒದಗಿಸಲಿದೆ ಎಂದು ಹೇಳಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶ್ ಪ್ರಸನ್ನ, ಆಹಾರ ಇಲಾಖೆ ಸಹಾಯಕ ನಿರ್ದೇಶಕರಾದ ರಮಾ, ಪ್ರಾಧ್ಯಾಪಕ ನವೀನ್ ಕುಮಾರ್, ಆಹಾರ ನಿರೀಕ್ಷಕಿ ವೀಣಾ, ಯಶಸ್ವಿನಿ, ನಿಶಾ, ಸ್ವಾತಿ, ಸೀನಾ ಕುಮಾರಿ, ಕಿರಣ್, ನಾಗೇಂದ್ರ, ಪ್ರಮೋದ್ ಕುಮಾರ್, ಗಿರೀಶ್, ಕುಸುಮ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-51-1518279021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.