ಮಡಿಕೇರಿ: ವಿದ್ಯಾರ್ಥಿಗಳಲ್ಲಿ ಮಾದಕವಸ್ತುಗಳ ಕುರಿತು ಇನ್ನಷ್ಟು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.

ಇಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಹಂತದಲ್ಲಿ ಮತ್ತಷ್ಟು ಹೆಚ್ಚಿನ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು.

ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್, ಡೆಂಟಲ್ ಸೇರಿದಂತೆ ಪದವಿ ಮತ್ತು ಸ್ಮಾತಕೋತ್ತರ ಕಾಲೇಜುಗಳಲ್ಲೂ ಸಹ ಅರಿವು ಮೂಡಿಸಬೇಕು. ರಜೆ ಅವಧಿಯಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ‘ವಾರಕ್ಕೆ ಮೂರು ದಿನವಾದರೂ ವಿವಿಧ ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಬೇಕು. ಈ ವೇಳೆ ಪೊಲೀಸ್ ಇಲಾಖೆಗೂ ಮಾಹಿತಿ ನೀಡಿ ಅವರ ಸಲಹೆ ಮಾರ್ಗದರ್ಶನ ಪಡೆಯಬೇಕು’ ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಡ್ರಗ್ಸ್ ನಿಯಂತ್ರಣ ಇಲಾಖೆಗಳು ಸೇರಿದಂತೆ ವಿದ್ಯಾರ್ಥಿ ನಿಲಯಗಳು, ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಇಲಾಖೆ ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಮತ್ತಷ್ಟು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ, ಇನ್ಸ್ಪೆಕ್ಟರ್ ಟಿ.ಆರ್.ಸುರೇಂದ್ರ, ಅಬಕಾರಿ ಇನ್ಸ್ಪೆಕ್ಟರ್ ಚೇತನ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯ್, ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಆಶಾ, ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.