ಮಡಿಕೇರಿ: ಮೇ ಅಂತ್ಯದ ವೇಳೆಗೆ ಮಡಿಕೇರಿ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಲು ಪ್ರಯತ್ನಿಸಲಾಗುವುದು. ಆ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಶಾಸಕ ಡಾ.ಮಂತರ್ಗೌಡ ತಿಳಿಸಿದರು.

ಇಲ್ಲಿನ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಜನರು ಉನ್ನತ ಶಿಕ್ಷಣ ಪಡೆದು ವಿವಿಧ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಅದಕ್ಕೆ ಅಂಬೇಡ್ಕರ್ ಅವರಂತೆ ನಿರಂತರ ಹಾಗೂ ಕಠಿಣ ಪರಿಶ್ರಮ ಅಗತ್ಯ. ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರಿದ್ದಾರೆ. ಆದ್ದರಿಂದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು ಎಂದರು.

‘ಅಂಬೇಡ್ಕರ್ ಅವರ ಗುರಿ, ಉದ್ದೇಶ, ಆಶಯ, ಸಾಧನೆ ಇವುಗಳನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಮುನ್ನಡೆಯಬೇಕು. ಪ್ರತಿ ದಿನವೂ ಅಂಬೇಡ್ಕರ್ ಅವರನ್ನು ಸ್ಮರಿಸಬೇಕು. ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರತಿಫಲವಾಗಿ ನಾವು ವಿದ್ಯೆ, ಉದ್ಯೋಗ ಪಡೆದು, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದೇವೆ’ ಎಂದರು.

ಮಹಾ ಬೋಧಿ ಸಂಘದ ಅಧ್ಯಕ್ಷ ಮೋಹನ್ ಮೌರ್ಯ ಮಾತನಾಡಿ, ‘ಹಲವು ದಶಕಗಳ ಕನಸು ನನಸಾಗುತ್ತಿದ್ದು, ಆ ದಿಸೆಯಲ್ಲಿ ಶಾಸಕರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಜಾಗ ನೀಡಿ, ಪ್ರತಿಮೆ ನಿರ್ಮಾಣ ಕಾರ್ಯ ನಡೆಯುತ್ತಿದೆ’ ಎಂದರು.

ಕಲಾವಿದ ಈ.ರಾಜು ಮತ್ತು ತಂಡದವರು ಅಂಬೇಡ್ಕರ್ ಕುರಿತು ಹಾಡಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಯನ್ನು ಗೌರವಿಸಲಾಯಿತು. ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.

ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಮುಖಂಡರಾದ ಟಿ.ಪಿ.ರಮೇಶ್, ಜನಾರ್ದನ, ಎಚ್.ಎಲ್.ದಿವಾಕರ, ಪ್ರೇಮಕುಮಾರ್, ನಗರಸಭೆ ಸದಸ್ಯರಾದ ಸತೀಶ್, ಚಂದ್ರಶೇಖರ್, ಮುತ್ತುರಾಜು, ಜುಲೇಕಾಬಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶಿಲ್ದಾರ್ ಶ್ರೀಧರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿ ಭವನದವರೆಗೆ ಮೆರವಣಿಗೆ ನಡೆಯಿತು.

ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ ಹಾಗೂ ಕಂಸಾಳೆ ಕಲಾತಂಡಗಳು ಪಾಲ್ಗೊಂಡು ಗಮನ ಸೆಳೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-51-383853856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.