ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು ‘ಕನ್ನಡ’ ಲಿಪಿಯಲ್ಲಿ ಹಾಗೂ ಹಿಂದಿ ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡಬೇಕು. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ (6 ರಿಂದ 12 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರ ಕಳುಹಿಸಿಕೊಡಬೇಕು.