ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಗೆ ತಟ್ಟಿತು ಜಲಸಂಕಟ!

ಬತ್ತಿ ಹೋದ ಕೂಟುಹೊಳೆ, ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ನಿರ್ಧಾರ
Published 8 ಮೇ 2024, 4:34 IST
Last Updated 8 ಮೇ 2024, 4:34 IST
ಅಕ್ಷರ ಗಾತ್ರ

ಮಡಿಕೇರಿ: ಪ್ರಸ್ತುತ ಬರ ಪರಿಸ್ಥಿತಿ ದಿನ ಕಳೆದಂತೆ ಭೀಕರವಾಗುತ್ತಿದ್ದು, ಮಡಿಕೇರಿ ನಗರದಲ್ಲಿ ಜಲಸಂಕಟದ ಸ್ಥಿತಿ ಉದ್ಭವಿಸಿದೆ. ನಗರಕ್ಕೆ ನೀರು ಪೂರೈಕೆ ಮಾಡುತ್ತಿದ್ದ ಪ್ರಮುಖ ಮೂಲ ಕೂಟುಹೊಳೆ ಬಿರುಬಿಸಿಲಿನ ತಾಪಕ್ಕೆ ಈಗಾಗಲೇ ಬತ್ತಿ ಹೋಗಿದೆ. ಸದ್ಯ, ಕುಂಡಾಮೇಸ್ತ್ರೀಯಿಂದ ಇಲ್ಲಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಮಳೆ ಬಾರದೇ ಇರುವುದರಿಂದ ಇದೀಗ ಕುಂಡಾಮೇಸ್ಟ್ರೀಯಲ್ಲೂ ನೀರಿನ ಸಂಗ್ರಹ ಕಡಿಮೆಯಾಗುತ್ತಿದೆ. ಪರಿಸ್ಥಿತಿಯನ್ನು ಅವಲೋಕಿಸಿದ ನಗರಸಭೆ ದಿನಬಿಟ್ಟು ದಿನ ನೀರು ಸರಬರಾಜು ಮಾಡಲು ನಿರ್ಧರಿಸಿದೆ.

ಈಗ ನೀರಿನ ಬವಣೆ ಇರುವುದರಿಂದ ಮುಂದೆ ಮಳೆ ಬಂದು ನೀರಿನ ಹರಿವು ಹೆಚ್ಚಾಗಿ ನೀರು ಶೇಖರಣೆ ಆಗುವವರೆಗೆ ಎಲ್ಲಾ 23 ವಾರ್ಡ್‍ಗಳಿಗೆ ಏಕಕಾಲದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಕಷ್ಟಕರವಾಗಿದೆ. ಇದನ್ನು ಸರಿದೂಗಿಸಲು ದಿನ ಬಿಟ್ಟು ದಿನ ಕುಡಿಯುವ ನೀರನ್ನು ಸರಬರಾಜು ಮಾಡಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

ಇಂತಹ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀರನ್ನು ಮಿತವಾಗಿ ಬಳಸಿ, ಅನುಪಯುಕ್ತವಾಗಿ ಬಳಸಬಾರದು. ಕಾರು, ಸ್ಕೂಟರ್ ಇತ್ಯಾದಿ ವಾಹನಗಳನ್ನು ಕುಡಿಯುವ ನೀರಿನಿಂದ ಶುಚಿಗೊಳಿಸಬಾರದು. ಅಲ್ಲದೆ, ಮನೆಯ ಹೂ ತೋಟ ಮತ್ತು ಹೂ ಕುಂಡಗಳಿಗೆ ಕುಡಿಯುವ ನೀರನ್ನು ಉಪಯೋಗಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಒಂದು ವೇಳೆ ಇದನ್ನು ಉಲ್ಲಂಘಿಸಿ ಕುಡಿಯುವ ನೀರನ್ನು ಅನುಪಯುಕ್ತವಾಗಿ ಬಳಕೆ ಮಾಡುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು. ಮತ್ತೆ ಮರುಕಳಿಸಿದ್ದಲ್ಲಿ 1964ರ ಪೌರಸಭೆಗಳ ಅಧಿನಿಯಮದಂತ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಂತೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT