ಮಡಿಕೇರಿ: ‘ಯಾವುದೇ ಉದ್ಯೋಗವನ್ನಾದರೂ ಸರಿ; ಅದು ಸಣ್ಣ ಉದ್ಯೋಗ ಎಂದು ಭಾವಿಸಿ ನಿರಾಸಕ್ತಿ ತೋರಿಸಬಾರದು. ಸಿಕ್ಕ ಸಣ್ಣ ಉದ್ಯೋಗ ಮತ್ತೆ ದೊಡ್ಡ ಅವಕಾಶ, ಉದ್ಯೋಗವನ್ನು ಕಲ್ಪಿಸಿಕೊಡುತ್ತದೆ. ಆದ್ದರಿಂದ ಉದ್ಯೋಗಾಕಾಂಕ್ಷಿಗಳು ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಎಸ್.ಸುರೇಶ್ ನಂಜಪ್ಪ ತಿಳಿಸಿದರು.

ಬೆಂಗಳೂರು ಕೊಡವ ಸಮಾಜದ ವತಿಯಿಂದ ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಕಾವೇರಿ ಪ್ಲೆಸ್ಮೆಂಟ್ಸೆಲ್ ಹಾಗೂ ‘ಅಡೆಕ್ಕೊ’ ಇಂಡಿಯಾ ಸಂಸ್ಥೆ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಕೊಡವ ಸಮಾಜಕ್ಕೆ 114 ವರ್ಷಗಳಷ್ಟು ಸುದೀರ್ಘ ಇತಿಹಾಸವಿದೆ. ಕೊಡಗಿನ ಉದ್ಯೋಗಾಕಂಕ್ಷಿಗಳಿಗ ಉದ್ಯೋಗ ಕಲ್ಪಿಸಲು ಮಹಿಳಾ ಕಾಲೇಜಿನಲ್ಲಿ ಮೊದಲ ಹೆಜ್ಜೆ ಇಡಲಾಗಿದೆ. ಬೆಂಗಳೂರು ಕೊಡವ ಸಮಾಜ ಕೇವಲ ಸಮುದಾಯದ ಮಂದಿಗೆ ಮಾತ್ರವಲ್ಲದೇ ಯಾವುದೇ ಜಾತಿ, ಧರ್ಮ, ಭೇದ-ಭಾವ ಇಲ್ಲದೆ ಅರ್ಹ ಅಭ್ಯರ್ಥಿಗಳು ಹಾಗೂ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಪ್ರಮುಖ ಆದ್ಯತೆ ನೀಡಿದೆ ಎಂದು ತಿಳಿಸಿದರು.

‘ಪಿಯುಸಿ, ಪದವಿ ಮುಗಿದ ನಂತರ ವಿದ್ಯಾರ್ಥಿಗಳಲ್ಲಿ ಮುಂದೇನು ಎಂಬ ಗೊಂದಲ ಇರುತ್ತದೆ. ಅದನ್ನು ನಿವಾರಿಸುವ ಸಲುವಾಗಿ ಬೆಂಗಳೂರು ಕೊಡವ ಸಮಾಜ ಮಡಿಕೇರಿ, ಗೋಣಿಕೊಪ್ಪದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ನಿರುದ್ಯೋಗಿಗಳು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಮುಂದಿನ ದಿನಗಳಲ್ಲಿಯೂ ಉದ್ಯೋಗ ಮೇಳ ನಡೆಸಲಿದ್ದು, ಮಹಿಳಾ ಕಾಲೇಜಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

‘ಅಡೆಕ್ಕೊ‘ ಇಂಡಿಯಾ ಸಂಸ್ಥೆಯ ನಿರ್ದೇಶಕ ಕೊಂಗಂಡ ಜಿ.ಸಂಕೇತ್ ಚೆಂಗಪ್ಪ ಮಾತನಾಡಿ, ‘ಅಡೆಕ್ಕೊ’ ಎಂಬುದು ಸ್ವಿಜರ್ಲೆಂಡ್ ಮೂಲದ ವಿಶ್ವದ ಅತಿದೊಡ್ಡ ಮಾನವ ಸಂಪನ್ಮೂಲ ಮತ್ತು ನೇಮಕಾತಿ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆ. ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಇದು ತನ್ನ ಶಾಖೆಗಳನ್ನು ಹೊಂದಿದೆ. ಇದು ತಾತ್ಕಾಲಿಕ ಮತ್ತು ಶಾಶ್ವತ ಉದ್ಯೋಗಾವಕಾಶ ಒದಗಿಸುತ್ತದೆ. ಅಲ್ಲದೆ, ಸಂಬಳ ನಿರ್ವಹಣೆ ಮತ್ತು ಉದ್ಯೋಗಿಗಳ ತರಬೇತಿಯಂತಹ ಸೇವೆಗಳನ್ನು ಸಹ ನೀಡುತ್ತದೆ. ಇದು ಉದ್ಯೋಗ ಮೇಳದ ಮೂಲಕ ಸುಮಾರು 7 ಲಕ್ಷ ಉದ್ಯೋಗಾಕಾಂಕ್ಷಿಗಳಿಗೆ ಬೆಂಗಳೂರಿನ ವಿವಿಧ ಶಾಖೆಗಳಲ್ಲಿ ಉದ್ಯೋಗವನ್ನು ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಎಚ್.ಪಿ.ನಿರ್ಮಲ ಮಾತನಾಡಿ, ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಕ್ಕಾಗಿ ಪೈಪೋಟಿಗಳು ಹೆಚ್ಚಿದ್ದು, ಅಭ್ಯರ್ಥಿಗಳು ಲಭ್ಯವಿರುವ ಅವಕಾಶ ಸದುಪಯೋಗಪಡಿಸಿಕೊಂಡು ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಕೊಡಗಿನಲ್ಲಿ ಕೌಶಲಾಧಾರಿತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು’ ಎಂದರು.

ಉದ್ಯೋಗ ಮೇಳದಲ್ಲಿ ಕೊಡಗಿನ ವಿವಿಧಡೆಯಿಂದ 75ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, 65 ಮಂದಿ ಆಯ್ಕೆಯಾದರು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಹಬೀಬ್ ಅಹಮದ್, ರೇವತಿ ರಮೇಶ್, ರಿಯಾಜುದ್ದೀನ್, ಪ್ರೇಮ ನಿಂಗಪ್ಪ ಮತ್ತು ಪ್ರೇಮ ಕೃಷ್ಣಪ್ಪ, ಅಡೆಕ್ಕೊ ಇಂಡಿಯಾ ಸಂಸ್ಥೆಯ ನಿರ್ದೇಶಕ ದೀಪಕ್ ಗುಪ್ತ, ಬೆಂಗಳೂರು ಕೊಡವ ಸಮಾಜದ ಉಪಾಧ್ಯಕ್ಷ ಕಿಶನ್ ಕಾವೇರಿಯಪ್ಪ ಭಾಗವಹಿಸಿದ್ದರು.

ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್.ಎಸ್.ವೇಣುಗೋಪಾಲ್, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಉದಯಕುಮಾರ್, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎಚ್.ಪಿ.ಸುದೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-2056077897

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.