ಮಡಿಕೇರಿ: ಕೊಡವರಿಗೆ ಪ್ರತ್ಯೇಕ ಮತ ಕ್ಷೇತ್ರ ಹಾಗೂ ರಾಷ್ಟ್ರೀಯ ಜಾತಿಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಂ ನೀಡಬೇಕು ಎಂದು ಒತ್ತಾಯಿಸಿ ಕಳೆದೆರಡು ದಿನಗಳಿಂದ ಇಲ್ಲಿನ ಕೊಡವ ಮಂದ್ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಗುರುವಾರ ತೆರೆ ಬಿತ್ತು. ಒಟ್ಟು 53 ಗಂಟೆಗಳ ಕಾಲ ಧರಣಿ ನಡೆಯಿತು.

ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಗುರುವಾರ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆಗಳನ್ನು ಆಲಿಸಿದರು.

ಹೈಕೋರ್ಟ್ ವಕೀಲರಾದ ಕಿರಣ್ ನಾರಾಯಣ್ ಹಾಗೂ ಕುಶಾಗ್ರ ಅವರೂ ಇದೇ ವೇಳೆ ಭೇಟಿ ನೀಡಿದರು. ಈ ವೇಳೆ ಮೊಬೈಲ್ ಕರೆ ಮೂಲಕ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಮಾತನಾಡಿ, ಬೇಡಿಕೆಗಳನ್ನು ಕುರಿತು ಆಲಿಸಿದರು.

ಎ.ಎಸ್.ಪೊನ್ನಣ್ಣ ಮಾತನಾಡಿ, ‘ಮನವಿ ಪತ್ರವನ್ನು ವಿವರವಾಗಿ ಓದುವೆ’ ಎಂದು ಹೇಳಿದರು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ, ‘ಮುಂಬರುವ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಚುನಾವಣಾ ಕ್ಷೇತ್ರವನ್ನು ರಚಿಸುವ ಮೂಲಕ ಸಂಸತ್ತು ಮತ್ತು ವಿಧಾನಸಭೆಯಲ್ಲಿ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದರು.

ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕಾಗಿ ಇರುವ ‘ಸಂಘ’ ಕ್ಷೇತ್ರದ ಮಾದರಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕ್ಷೇತ್ರವನ್ನು ರಚಿಸಬೇಕು ಎಂದು ಆಗ್ರಹಿಸಿದರು.

2027ರ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಅನ್ನು ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

ರಾಷ್ಟ್ರಪತಿ, ಪ್ರಧಾನ ಮಂತ್ರಿ, ಮುಖ್ಯ ಚುನಾವಣಾ ಆಯುಕ್ತ, ಕರ್ನಾಟಕದ ಮುಖ್ಯಮಂತ್ರಿ, ಕೇಂದ್ರ ಗೃಹ ಸಚಿವ, ಕೇಂದ್ರ ಕಾನೂನು ಸಚಿವ ಮತ್ತು ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಿಗೆ ಮನವಿ ಪತ್ರವನ್ನು ರವಾನಿಸಲಾಗಿದೆ ಎಂದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ಕಾಂಗ್ರೆಸ್ ಜಿಲ್ಲಾ ವಕ್ತಾರ ತೆನ್ನಿರ ಮೈನಾ, ಪಟ್ಟಮಾಡ ಲಲಿತಾ ಗಣಪತಿ, ಕಾಳಚಂಡ ಅಪ್ಪಣ್ಣ, ಉದಿಯಂಡ ಚೆಂಗಪ್ಪ, ಚೋಳಪಂಡ ಜ್ಯೋತಿ ನಾಣಯ್ಯ, ಸವಿತಾ ತಿಮ್ಮಯ್ಯ, ನಂದಿನೆರವಂಡ ನಿಶಾ ಅಚ್ಚಯ್ಯ, ಬೊಪ್ಪಂಡ ಸರಳಾ, ಕನ್ನಂಡ ಕವಿತಾ ಬೊಳ್ಳಿಯಪ್ಪ, ಮೇಧುರ ಗಂಗಮ್ಮ ಕಾವೇರಪ್ಪ, ಮೇಧುರ ಶ್ರೇಯ ಮುತ್ತಮ್ಮ, ಸರ್ವಶ್ರೀ ಬಾಚರಣಿಯಂಡ ಚಿಪ್ಪಣ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-1518614386

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.