ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಏಪ್ರಿಲ್ 8ರಿಂದ ಮೂರು ದಿನಗಳ ಕಾಲ ಪಾಸ್ಪೋರ್ಟ್ ಮೇಳ ನಡೆಯಲಿದೆ.

ಕಳೆದ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.

ಕೊಡಗು ಜಿಲ್ಲೆಯ ಹಲವು ಮಂದಿ ಪಾಸ್ಪೋರ್ಟ್ ಬೇಕು ಎಂಬ ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಅವರು ಮನವಿಯಲ್ಲಿ ವಿವರಿಸಿದ್ದರು.

ಜೊತೆಗೆ, ಕಳೆದ ಬಾರಿ ನವದೆಹಲಿಗೆ ತೆರಳಿದ್ದಾಗ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಶ್ರೀಪ್ರಿಯಾ ರಂಗನಾಥನ್ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲೂ ಮನವಿ ಸಲ್ಲಿಸಿದ್ದರು.

ಇದಕ್ಕೆ ಸ್ಪಂದಿಸಿರುವ ಬೆಂಗಳೂರು ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗಳು ‘ಏಪ್ರಿಲ್ 8, 9, 10ರಂದು ಮೇಳ ಆಯೋಜಿಸಲಾಗುವುದು ಹಾಗೂ 8 ರಂದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಆಗಮಿಸಬೇಕು’ ಎಂದು ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರತ್ಯುತ್ತರ ಕಳುಹಿಸಿದ್ದಾರೆ.

ಕೊಡಗು ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.