ಶನಿವಾರ, ಸೆಪ್ಟೆಂಬರ್ 25, 2021
25 °C

ಆನೆಕಾಡು ಬಳಿ ಸರಣಿ ಅಪಘಾತ: ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಶಾಲನಗರ: ರಾಷ್ಟ್ರೀಯ ಹೆದ್ದಾರಿಯ ಗುಡ್ಡೆಹೊಸೂರು ಬಳಿ ಆನೆಕಾಡಿನಲ್ಲಿ ಸೋಮವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ.

ಮಡಿಕೇರಿ ಕಡೆಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಗ್ರಾಮೀಣ ಸಾರಿಗೆ ಬಸ್ ಪ್ರಯಾಣಿಕರನ್ನು ಇಳಿಸಲು
ನಿಲ್ಲಿಸಿತ್ತು. ಈ ಸಮಯದಲ್ಲಿ ಹಿಂದೆ ಬರುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ವೇಗ ತಗ್ಗಿಸಿದ್ದರು. ಆಗ ಅತಿವೇಗದಿಂದ ಬಂದ ಟವೇರಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ವಿಫ್ಟ್ ಕಾರು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಎರಡು ಕಾರುಗಳು ಹಾಗೂ ಬಸ್ಸಿನ ಹಿಂಭಾಗ ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಟವೇರಾ ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ಅದ್ದೂಸ್ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಗ್ರಾಮಾಂತರ ಹಾಗೂ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ‌ ಕ್ರಮ ಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು