ಮಡಿಕೇರಿ: ನಿವೇಶನ ಮತ್ತು ಮನೆ ನೀಡುವಂತೆ ಒತ್ತಾಯಿಸಿ ನೂರಾರು ಮಂದಿ ಮಡಿಕೇರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾ ಸಮಿತಿ ಮತ್ತು ಬಹುಜನ ಕಾರ್ಮಿಕ ಸಂಘದ ವತಿಯಿಂದ ಇಲ್ಲಿನ ಹಳೆಯ ಖಾಸಗಿ ಬಸ್ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಜಾಥಾ ನಡೆಯಿತು. ‘ನಮ್ಮ ಭೂಮಿ ನಮ್ಮ ಹಕ್ಕು, ಭಿಕ್ಷೆಯಲ್ಲ, ಎಲ್ಲಾ ಬಡವರ ಸ್ವಾಭಿಮಾನದ ಬದುಕಿಗಾಗಿ ಭೂಮಿಯ ಹಕ್ಕನ್ನು ಸರ್ಕಾರ ನೀಡಬೇಕು’ ಎಂದು ಒತ್ತಾಯಿಸಿದರು.

ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ, ‘ಕೊಡಗಿನಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಕಾಫಿ ತೋಟಗಳಲ್ಲಿ ಲೈನ್ಮನೆಗಳಲ್ಲಿ ವಾಸವಿದ್ದಾರೆ. ಅವರಿಗೆ ತಲಾ ತಲಾ 5 ಸೆಂಟ್ನಂತೆ 50 ಎಕರೆ ಜಾಗವನ್ನು ನಿವೇಶನಕ್ಕೆ ಕಾಯ್ದಿರಿಸಬೇಕು’ ಎಂದು ಒತ್ತಾಯಿಸಿದರು.

ಒತ್ತುವರಿ ಮಾಡಿರುವ ಭೂಮಿಯನ್ನು ಇಂತಹ ಬಡವರಿಗೆ ನೀಡಬೇಕು, ಈಗಾಗಲೇ ಅನೇಕ ಕಡೆ ಜಾಗ ಗುರುತಿಸಿದ್ದೇವೆ. ಆದರೂ ನಿವೇಶನ ನೀಡುವ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು. ಈ ಕುರಿತು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ. ಆದರೂ, ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್ಗೆ ಬಡವರು ಮತ ಹಾಕಿ ಗೆಲ್ಲಿಸಿದರು. ಆದರೆ, ಗೆದ್ದ ನಂತರ ಬಡವರ ಪರ ನಿಲ್ಲದೇ ಶ್ರೀಮಂತರ ಪರ ಇದ್ದಾರೆ ಎಂದು ಆರೋಪಿಸಿದರು. ಭೂಗುತ್ತಿಗೆ ನೀತಿ ರದ್ದುಪಡಿಸಿ, ಒತ್ತುವರಿ ಭೂಮಿಯನ್ನು ವಶಕ್ಕೆ ಪಡೆದು ನಿರ್ವಸಿತರಿಗೆ ಭೂ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎನ್.ಮೂರ್ತಿ, ಬಸವರಾಜು,ಕೆ.ಮೊಣ್ಣಪ್ಪ, ವೆಂಕಟಗಿರಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-51-65914698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.