ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಫೆ.13ರವರೆಗೆ ಕುಷ್ಠರೋಗ ಜಾಗೃತಿ ಆಂದೋಲನಾ

ಜಿಲ್ಲೆಯಲ್ಲಿ ಫೆ. 13ರವರೆಗೆ ಕುಷ್ಠರೋಗ ಜಾಗೃತಿ ಆಂದೋಲನಾ
Last Updated 3 ಫೆಬ್ರುವರಿ 2023, 6:15 IST
ಅಕ್ಷರ ಗಾತ್ರ

ಮಡಿಕೇರಿ: ಫೆ. 13ರವರೆಗೆ ಕೊಡಗು ಜಿಲ್ಲೆಯಲ್ಲಿ ‘ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ’ ನಡೆಯಲಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರ ಅಧ್ಯಕ್ಷತೆಯಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮದ ಬಗ್ಗೆ ಈಚೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ರೇಡಿಯೊ ಪ್ರಸಾರವನ್ನು ಕೂಡ ಮಾಡಲಾಗುವುದು. ಕೊಡಗು ಜಿಲ್ಲೆಯಲ್ಲಿ ಒಟ್ಟು 3 ಪ್ರಕರಣಗಳಿದ್ದು, ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ವ್ಯಾಪಕ ಮಾಹಿತಿ ನೀಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾ ಅಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಿಳಿಸಲಾಗಿದೆ ಎಂದರು.

ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿಲ್ಲ, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸುವುದೂ ಸೇರಿದಂತೆ ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಲಾಗುವುದು ಎಂದರು.

‘ಪಾದಗಳ ಮತ್ತು ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲ ಮಚ್ಚೆಗಳು, ತ್ವಚ್ಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ
ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ಭಿತ್ತಿಪತ್ರ, ಕರಪತ್ರ ಹಾಗೂ ಬ್ಯಾನರ್‌ಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ‘ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಬೇಕು, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಈ ಕುರಿತು ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಗೋಪಿನಾಥ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT