ಮಡಿಕೇರಿ: ಇಲ್ಲಿನ ಮಲ್ಲಿಕಾರ್ಜುನ ನಗರದ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಾರ್ಚ್ 26 ಮತ್ತು 27ರಂದು 37ನೇ ವರ್ಷದ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ.

ಮಾರ್ಚ್ 26ರಂದು ಸಂಜೆ 5 ಗಂಟೆಗೆ ಇಲ್ಲಿನ ಗಾಂಧಿ ಮೈದಾನದಿಂದ ವಿಶೇಷ ಪಲ್ಲಕ್ಕಿಯಲ್ಲಿ ಕೋದಂಡ ರಾಮ ಪರಿವಾರ ಉತ್ಸವ ಮೂರ್ತಿಯ ಮೆರವಣಿಗೆ ಹೊರಡಲಿದೆ. ಜನರಲ್ ತಿಮ್ಮಯ್ಯ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಂಡೆ ವಾದ್ಯ ಸಹಿತ 8-10 ಸಾಂಸ್ಕೃತಿಕ ಕಲಾತಂಡಗಳು, ಕಳಸ ಹೊತ್ತ ಮಹಿಳೆಯರು, ವಿವಿಧ ತಂಡಗಳಿಂದ ಭಜನೆಯೊಂದಿಗೆ ಮೆರವಣಿಗೆ ಸಾಗಲಿದೆ. ಮಹದೇವಪೇಟೆಯ ಬನ್ನಿಮಂಟಪದವರೆಗೆ ತೆರಳಿ ಅಲ್ಲಿಂದ ಕೋದಂಡ ರಾಮ ದೇವಾಲಯವನ್ನು ಸೇರಲಿದೆ. ಅಂದು ರಾತ್ರಿ ಭಕ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಮಾರ್ಚ್ 27ರಂದು ಬೆಳಿಗ್ಗೆ 8 ಗಂಟೆಯಿಂದ ದೇವಾಲಯದ ಆವರಣದಲ್ಲಿ ಕ್ಷೇತ್ರ ತಂತ್ರಿ ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯ ಅವರ ನೇತೃತ್ವದಲ್ಲಿ ಗುರು ಗಣಪತಿ ಹೋಮ, ಮಹಾ ಸಂಕಲ್ಪ, ಮಹಾ ಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ತತ್ವಕಲಾ ಹೋಮ, ಶಾಂತಿ ಹೋಮ, ಪೂರ್ಣಾಹುತಿ, ಪಂಚಾಮೃತ ಅಭಿಷೇಕ, ನವಕ ಪ್ರಧಾನ, ಕಲಶಾಭಿಷೇಕ, ಕುಂಭಾಭಿಷೇಕ ನಡೆಯಲಿದೆ. ಅಲ್ಲದೆ ದೇವಾಲಯ ಆವರಣದಲ್ಲಿ ದೇವ ನರ್ತನ ಕಾರ್ಯಕ್ರಮವಿದೆ ಎಂದು ಮಾಹಿತಿ ನೀಡಿದರು.

ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಂತ್ರಾಕ್ಷತೆ, ತೀರ್ಥ ಪ್ರಸಾದ ನಡೆಯಲಿದೆ. ಆ ನಂತರ ಕೋಸಂಬರಿ- ಪಾನಕ ವಿತರಣೆಯಾಗಲಿದೆ. ಜೊತೆಗೆ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಸಂಜೆ 5 ರಿಂದ 7ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಸಲಾಗುತ್ತದೆ. ಬಳಿಕ ಸಂಜೆ 7 ಗಂಟೆಗೆ ಬೆಂಗಳೂರಿನ ಹಲಸೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದಜಿ ಮಹಾರಾಜ್ ಅವರಿಂದ ಧಾರ್ಮಿಕ ಪ್ರವಚನ ನಡೆಯಲಿದೆ. ನಂತರ, ರಾತ್ರಿ ಭಕ್ತಾದಿಗಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಸುಮಾರು 5 ಸಾವಿರ ಭಕ್ತರು ಸೇರುವ ನಿರೀಕ್ಷೆ ಇದೆ. ಸಾಂಸ್ಕೃತಿಕ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ’ ಎಂದರು.

ಮಾರ್ಚ್ 25ರಂದು ಕ್ರೀಡಾ ಸಮಿತಿಯ ವತಿಯಿಂದ ಕೋದಂಡ ರಾಮ ದೇವಾಲಯದ ಆವರಣದಲ್ಲಿ ರಂಗೋಲಿ ಸೇರಿದಂತೆ ವಿವಿಧ ಕ್ರೀಡಾಗಳು ನಡೆಯಲಿವೆ ಎಂದರು.

ಸ್ವಾಗತ ಸಮಿತಿಯ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್, ಶ್ರೀಕೋದಂಡ ರಾಮ ದೇವಾಲಯ ಟ್ರಸ್ಟ್ನ ಅಧ್ಯಕ್ಷ ಎಚ್.ಎನ್.ನಂಜುಂಡ ಹಾಗೂ ಶ್ರೀಕೋದಂಡ ರಾಮೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-1045939313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.