ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ: ಎಸ್.ಪಿ.ಸ್ಪಷ್ಟನೆ

Published 10 ಮೇ 2024, 12:19 IST
Last Updated 10 ಮೇ 2024, 13:15 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ 16 ವರ್ಷ ವಯಸ್ಸಿನ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಖಚಿತಗೊಂಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಈ ಕುರಿತ ವ್ಯಾಪಕವಾಗಿ ಹರಡಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತಿಳಿಸಿತ್ತು. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್.ಪಿ. ಈ ಕುರಿತ ಸುದ್ದಿಯನ್ನು ಪರಿಶೀಲಿಸಲಾಗುತ್ತಿದೆ. ಮೃತದೇಹ ಸಿಕ್ಕಿದೆ ಎಂದು ಹೇಳಲಾದ ಪ್ರದೇಶದಲ್ಲಿ ಹುಡುಕಾಟ ನಡೆದಿದೆ. ಆದರೆ, ಈವರೆಗೆ ಯಾವುದೇ ಮೃತದೇಹ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಗುರುವಾರವಷ್ಟೇ ಬಾಲಕಿಗೂ ಆರೋಪಿಗೂ ಮದುವೆ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು. ಈ ವೇಳೆ ಮಕ್ಕಳ ರಕ್ಷಣಾ ಘಟಕಕ್ಕೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮದವೆಯನ್ನು ಮಾಡದಂತೆ ಬಾಲಕಿಯ ಪೋಷಕರ ಮನವೊಲಿಸಿದ್ದರು. 18 ವರ್ಷ ತುಂಬಿದ ನಂತರವೇ ಮದುವೆ ಮಾಡುವುದಾಗಿ ಮುಚ್ಚಳಿಕೆಯನ್ನು ಬರೆಸಿಕೊಂಡ ಅಧಿಕಾರಿಗಳು ವಾಪಸ್ಸಾದರು. ನಂತರ ಮನೆಗೆ ಬಂದ ಆರೋಪಿಯು ಬಾಲಕಿಯನ್ನು ಕಾಡಿಗೆ ಎಳೆದೋಯ್ದು ರುಂಡ ಕತ್ತರಿಸಿ, ಪರಾರಿಯಾಗಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT