ಮಡಿಕೇರಿ: ತಾಲ್ಲೂಕಿನ ತಡಿಯಂಡಮೋಳ್ ಬೆಟ್ಟದಲ್ಲಿ ಗುರುವಾರ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಶರಣ್ಯ (35) ಅವರು ಭಾನುವಾರ ಕಾಡಿನೊಳಗೆ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.

‘ಮೂರು ದಿನಗಳಿಂದ ಕಾಡಿನಲ್ಲಿ ಅಲೆದು ಬಂಡೆಯ ಸಮೀಪ ಕುಳಿತಿದ್ದೆ ಎಂದಷ್ಟೇ ಮಹಿಳೆ ಹೇಳಿದ್ದಾರೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸಿದ್ದಾರೆ’ ಎಂದು ಡಿಸಿಎಫ್ ಅಭಿಷೇಕ್ ‘ಪ್ರಜಾವಾಣಿ‘ಗೆ ತಿಳಿಸಿದರು.

ಕೇರಳದಿಂದ ಒಬ್ಬರೇ ಬಂದಿದ್ದ ಅವರು ಆನ್ಲೈನ್ ನೋಂದಣಿ ಮಾಡಿಕೊಂಡು ಚಾರಣಕ್ಕಾಗಿ ಹೊರಟಿದ್ದರು. ತಾವು ತಂಗಿದ್ದ ಹೋಂಸ್ಟೇಯವರನ್ನು ಗುರುವಾರ ಮಧ್ಯಾಹ್ನ ಸಂಪರ್ಕಿಸಿದ್ದ ಅವರು, ದಾರಿ ತಪ್ಪಿರುವುದಾಗಿ ಹೇಳಿದ್ದರು. ಬಳಿಕ ಅವರ ಮೊಬೈಲ್ ಫೋನ್ ಸ್ವಿಚ್ಡ್ಆಫ್ ಆಗಿತ್ತು.

ಅವರ ಪತ್ತೆಗಾಗಿ ಅರಣ್ಯ, ಪೊಲೀಸ್, ನಕ್ಸಲ್ ನಿಗ್ರಹ ದಳ ಹಾಗೂ ಸ್ಥಳೀಯರು ಸೇರಿದಂತೆ ಒಟ್ಟು 9 ತಂಡಗಳನ್ನು ನಿಯೋಜಿಸಲಾಗಿತ್ತು. ಥರ್ಮಲ್ ಡ್ರೋನ್ ಕ್ಯಾಮೆರಾ, ಶ್ವಾನದಳದ ನೆರವೂ ಪಡೆಯಲಾಗಿತ್ತು.

ಧೈರ್ಯವಂತೆ:

‘ಶರಣ್ಯ ಸಾಹಸಿಗರು. 3 ದಿನವಾದರೂ ಏಕಾಂಗಿಯಾಗಿ ಕಾಡಿನಲ್ಲಿ ಓಡಾಡಿರುವ ಅವರು ಧೈರ್ಯವಂತೆ. ಅಲ್ಲಿ ಮೊಬೈಲ್ ಸಂಪರ್ಕ ಸಿಗುವುದಿಲ್ಲ. ಇದರಿಂದಾಗಿ ಅವರು ಇದ್ದ ಸ್ಥಳದ ಮಾಹಿತಿ ತಿಳಿದಿರಲಿಲ್ಲ. ಹೀಗಾಗಿ ಶೋಧ ವಿಳಂಬವಾಯಿತು’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

‘ಯಾರೇ ಯಾವುದೇ ರಾಜ್ಯದಿಂದ ಚಾರಣಕ್ಕೆ ಬಂದು ನಾಪತ್ತೆಯಾದರೂ, ಅವರನ್ನು ಹುಡುಕುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿರುತ್ತದೆ. ನಾವು ಜವಾಬ್ದಾರಿ ನಿರ್ವಹಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಅವರ ಪತ್ತೆಗಾಗಿ ರಚಿಸಿದ್ದ 9 ತಂಡಗಳು, ಹಗಲಿರುಳೆನ್ನದೇ ಶೋಧ ಕಾರ್ಯ ನಡೆಸಿದವು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ ಭಾನುವಾರ ಹೆಚ್ಚುವರಿಯಾಗಿ 40 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇದರಲ್ಲಿ ಬುಡಕಟ್ಟು ಸಮುದಾಯದ ಜನರೂ ಇದ್ದರು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.