ಮಡಿಕೇರಿ: ಮುಂಗಾರು ಸನ್ನಿಹಿತವಾಗುತ್ತಿದ್ದು, ಎಲ್ಲ ಬಗೆಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಪೊನ್ನಂಪೇಟೆಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಜಿಲ್ಲೆಯ ಅಲ್ಲಲ್ಲಿ ಗಾಳಿ ಮಳೆಗೆ ಮರದ ಕೊಂಬೆಗಳು ಬೀಳುತ್ತಿದ್ದು, ಇದರಿಂದ ವಿದ್ಯುತ್ ಹಾಗೂ ಸಾರಿಗೆ ಸಂಪರ್ಕಕ್ಕೆ ಅಡಚಣೆ ಉಂಟಾಗುತ್ತದೆ. ಆದ್ದರಿಂದ ರಸ್ತೆ ಬದಿ ಬೀಳುವ ಕೊಂಬೆಗಳನ್ನು ಕಡಿಯುವುದು, ಚರಂಡಿ ಹೂಳು ತೆಗೆಯುವುದು, ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವುದು, ಮತ್ತಿತರ ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.

ಅಂಗನವಾಡಿ, ಶಾಲಾ-ಕಾಲೇಜುಗಳ ಕಟ್ಟಡಗಳ ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಹಳೆಯ ಕಟ್ಟಡಗಳು ಬೀಳುವ ಹಂತದಲ್ಲಿದ್ದರೆ ವರದಿ ನೀಡುವಂತೆಯೂ ಸೂಚಿಸಿದರು. ವಿದ್ಯುತ್ ಹಳೆಯ ಕಂಬಗಳನ್ನು ಬದಲಿಸುವುದು, ವಿದ್ಯುತ್ ಪರಿವರ್ತಕಗಳನ್ನು ದಾಸ್ತಾನು ಮಾಡಿಕೊಂಡು ಅಳವಡಿಸುವುದು ಮತ್ತಿತರ ಕಾರ್ಯದ ಬಗ್ಗೆ ಸೆಸ್ಕ್ ಎಂಜಿನಿಯರ್ ಗಮನಹರಿಸುವಂತೆ ಹೇಳಿದರು.

ಕೆಲವು ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಪರಿಹರಿಸಬೇಕು. ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಹೆಚ್ಚಿನ ಗಮನ ನೀಡಬೇಕು ಎಂದರು. ರಸ್ತೆ ಬದಿಯ ಗಿಡಗಂಟೆಗಳನ್ನು ಕಡಿಯದಿದ್ದಲ್ಲಿ ಸೆಸ್ಕ್, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಗೆ ಕೆಲಸ ಹೆಚ್ಚಾಗಲಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಆದ್ದರಿಂದ ಈ ಕೆಲಸವನ್ನು ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಹೆಚ್ಚಿನ ಮಳೆಯಿಂದಾಗಿ ಮನೆ ಹಾನಿಯಾದಲ್ಲಿ ಕೂಡಲೇ ಪರಿಹಾರ ವಿತರಿಸಲು ಕ್ರಮವಹಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಆಹಾರ ಧಾನ್ಯವನ್ನು ಸಮರ್ಪಕವಾಗಿ ಪೂರೈಸಬೇಕು. ನದಿ, ಹೊಳೆ ಬದಿಯಲ್ಲಿ ವಾಸಿಸುವ ಕುಟುಂಬಗಳಿಗೆ ಮುನ್ನೆಚ್ಚರಿಕೆಯಾಗಿ ಮಾಹಿತಿ ನೀಡಬೇಕು ಎಂದರು.

ಮಳೆಗಾಲದ ಸಂದರ್ಭದಲ್ಲಿ ಜಾನುವಾರು ರಕ್ಷಣೆಗೂ ಗಮನಹರಿಸಬೇಕು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಹಾಗೂ ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಸಕರು ಸೂಚಿಸಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರವಹಿಸಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಇರಬೇಕು ಎಂದು ನಿರ್ದೇಶನ ನೀಡಿದರು. ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಮಾತನಾಡಿ, ಮುಂಗಾರು ಸಂದರ್ಭದಲ್ಲಿ ಮುನ್ನೆಚ್ಚರ ವಹಿಸುವ ಬಗ್ಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಲಾಲು ಅಪ್ಪಣ್ಣ ಮಾತನಾಡಿ, ಬಿರುನಾಣಿ, ಬಿ.ಶೆಟ್ಟಿಗೇರಿ ವ್ಯಾಪ್ತಿಯಲ್ಲಿ ಮಳೆ ಆರಂಭವಾದ ನಂತರ ಜಂಗಲ್ ಕಟ್ಟಿಂಗ್, ಗುಂಡಿ ಮುಚ್ಚುವುದು, ಚರಂಡಿ ಸ್ವಚ್ಚಗೊಳಿಸುವುದು ಸೇರಿದಂತೆ ಯಾವುದೇ ರೀತಿಯ ಕೆಲಸ ಮಾಡಲು ಕಷ್ಟಸಾಧ್ಯ, ಆದ್ದರಿಂದ ಮಳೆ ಆರಂಭಕ್ಕೂ ಮೊದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು.

ಕುಡಿಯುವ ನೀರು ವಿಭಾಗದ ಎಂಜಿನಿಯರ್ ಭಾಸ್ಕರ ಮಾತನಾಡಿ, ಕುಡಿಯುವ ನೀರು ಕಾಮಗಾರಿಗೆ ಸರ್ಕಾರದಿಂದ ಒಂದೂವರೆ ಕೋಟಿ ಅನುದಾನ ಬಿಡುಗಡೆ ಆಗಿದ್ದು, ಕಾಮಗಾರಿ ಸಂಬಂಧ ಅನುಮೋದನೆ ನೀಡಬೇಕಿದೆ ಎಂದು ಕೋರಿದರು. ಪೊನ್ನಂಪೇಟೆ ತಹಶೀಲ್ದಾರರಾದ ಸಂಜನಾ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-1196400962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.