ಮಡಿಕೇರಿ: ಮಡಿಕೇರಿ ನಗರಸಭೆಯಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ನಗರಸಭೆಯ ಮುಂಭಾಗ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ನಗರ ಘಟಕದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ‘ನಗರಸಭೆಯ ಆಡಳಿತ ಪಕ್ಷದ ಸದಸ್ಯರ ನಡುವೆ ಒಮ್ಮತ ಇಲ್ಲ. ಇದರಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ’ ಎಂದು ದೂರಿದರು.

ಪಕ್ಷದ ಮುಖಂಡ ಟಿ.ಪಿ.ರಮೇಶ್ ಮಾತನಾಡಿ, ‘ಮಡಿಕೇರಿ ನಗರದಲ್ಲಿ ಸಾಲು ಸಾಲು ಸಮಸ್ಯೆಗಳಿವೆ. ಬೀದಿನಾಯಿಗಳ ಕಾಟ ಹೆಚ್ಚಾಗಿದೆ, ಅಮೃತ್–2 ಯೋಜನೆಯಿಂದ ರಸ್ತೆಗಳು ಹಾಳಾಗಿದೆ. ಜನಸಾಮಾನ್ಯರಿಗೆ ಯಾವುದೇ ಕೆಲಸಗಳು ಆಗುತ್ತಿಲ್ಲ. ರಸ್ತೆ ಅಭಿವೃದ್ಧಿ ಆಗಿಲ್ಲ’ ಎಂದು ಸಮಸ್ಯೆಗಳನ್ನು ಬಿಡಿಸಿಟ್ಟರು. ಬೇಡಿಕೆಗಳು ಈಡೇರದೇ ಹೋದರೆ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸ್ಥಳಕ್ಕೆ ಬಂದ ಪೌರಾಯುಕ್ತ ಎಚ್.ಆರ್.ರಮೇಶ್ ಮನವಿ ಪತ್ರ ಸ್ವೀಕರಿಸಿದರು. ಕೋಚನ ಚೇತನ್, ಸದಾ ಮುದ್ದಪ್ಪ, ಮುದ್ದುರಾಜ್, ಜೆ.ಸಿ.ಜಗದೀಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-1152217169

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.