ಮಡಿಕೇರಿ: ಇಲ್ಲಿನ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ವತಿಯಿಂದ ಓಂಕಾರೇಶ್ವರ ಹಾಗೂ ಆಂಜನೇಯ ದೇವಾಲಯಗಳ ವಾರ್ಷಿಕ ಪ್ರತಿಷ್ಠಾ ದಿನಾಚರಣೆ ಹಾಗೂ ಆಂಜನೇಯ ದೇವಾಲಯ ಆವರಣದಲ್ಲಿ ನೂತನ ನವಗ್ರಹ ಪ್ರತಿಷ್ಠಾಪನಾ ಕಾರ್ಯ ಶನಿವಾರ

ಕ್ಷೇತ್ರ ತಂತ್ರಿಗಳಾದ ಉಚ್ಚಿಲದ ವೇದಬ್ರಹ್ಮ ನೀಲೇಶ್ವರ ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನಡೆದವು. ಸಂಜೆ ಪ್ರಾರ್ಥನೆ, ಆಂಜನೇಯ ಗುಡಿಯಲ್ಲಿ ಪುಣ್ಯಾಹ, ಆರೂಢ ಪರಿಗ್ರಹ ಹಾಗೂ ನವಗ್ರಹ ಬಿಂಬ ಪರಿಗ್ರಹ, ಜಲಾಧಿವಾಸ, ವಾಸ್ತುರಾಕ್ಷೋಘ್ನ ಹೋಮ, ವಾಸ್ತು ಬಲಿ ಹಾಗೂ ಮಹಾಪೂಜೆಗಳು ನಡೆದವು.

ಏಪ್ರಿಲ್ 26 ರಂದು ಬೆಳಿಗ್ಗೆ 7 ರಿಂದ ಗಣಪತಿ ಹೋಮ, ಬಿಂಬ ಶುದ್ಧಿ, ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರಿಂದ 11 ಗಂಟೆಗೆ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ನವಗ್ರಹ ಪ್ರತಿಷ್ಠಾಪನೆ, ಸಾನ್ನಿಧ್ಯ ಕಳಶ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ನಂತರ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-51-556089329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.