ಮಡಿಕೇರಿ: ಇಲ್ಲಿನ ಓಂಕಾರೇಶ್ವರ ದೇವಾಲಯ ಹಾಗೂ ಆಂಜನೇಯ ದೇವಾಲಯದ ವಾರ್ಷಿಕ ಪ್ರತಿಷ್ಠಾ ದಿನಾಚರಣೆ ಏ.26ರಂದು ನಡೆಯಲಿದೆ.

ಇದರೊಂದಿಗೆ ಆಂಜನೇಯ ದೇವಾಲಯದ ಆವರಣದಲ್ಲಿ ನೂತನವಾಗಿ ನವಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಕ್ಷೇತ್ರ ತಂತ್ರಿಗಳಾದ ಉಚ್ಚಿಲದ ನೀಲೇಶ್ವರ ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆ ಜರುಗಲಿದೆ.

ಏ. 25ರಂದು ಸಂಜೆ 6ರಿಂದ ಪ್ರಾರ್ಥನೆ, ಆಂಜನೇಯ ಗುಡಿಯಲ್ಲಿ ಪುಣ್ಯಾಹ, ಆರೂಢ ಪರಿಗ್ರಹ ಹಾಗೂ ನವಗ್ರಹ ಬಿಂಬ ಪರಿಗ್ರಹ, ಜಲಾಧಿವಾಸ, ವಾಸ್ತು ಬಲಿ ಹಾಗೂ ಮಹಾಪೂಜೆ ನಡೆಯಲಿದೆ.

ಏ.26ರಂದು ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಬಿಂಬ ಶುದ್ಧಿ, ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರಿಂದ 11 ಗಂಟೆಗೆ ಆಂಜನೇಯ ದೇವಾಲಯದ ಆವರಣದಲ್ಲಿ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ನವಗ್ರಹ ಪ್ರತಿಷ್ಠಾಪನೆ, ಸಾನ್ನಿಧ್ಯ ಕಳಶ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆಯಾಗಲಿದೆ ಎಂದು ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-823209540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.