ಮಡಿಕೇರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ‘ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಜೂನ್ 2ರಂದು ಬೆಳಿಗ್ಗೆ 9.30ಕ್ಕೆ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಜಿಮ್ನಾಸ್ಟಿಕ್ ಹಾಲ್ನಲ್ಲಿ ಏರ್ಪಡಿಸಲಾಗಿದೆ.

ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್ ಮತ್ತು ಪ್ರಬಂಧ ಬರೆಯುವ ಹಾಳೆಯನ್ನು ಮಾತ್ರ ನೀಡಲಾಗುತ್ತದೆ. ಚಿತ್ರಕಲೆ ಹಾಗೂ ಪ್ರಬಂಧ ಬರೆಯಲು ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು.

ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಮಾಹಿತಿಗೆ ದೂ: 08272-221855, ಮೊ: 7760738447, ಮೊ: 6361713238 ಸಂರ್ಪಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-51-1949991998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.