ಮಡಿಕೇರಿ: ಮಡಿಕೇರಿ ಅರಮನೆಯನ್ನು ಕೇಂದ್ರ ಸರ್ಕಾರ ಸಂರಕ್ಷಿತ ಸ್ಮಾರಕವೆಂದು ಘೋಷಿಸಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಡಿಕೇರಿ ಅರಮನೆಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಹಾಗೂ ಅವಶೇಷಗಳ ಕಾಯ್ದೆ, 1958ರ ಅಡಿಯಲ್ಲಿ ಸಂರಕ್ಷಿತ ಸ್ಮಾರಕವೆಂದು ಅಧಿಕೃತವಾಗಿ ಘೋಷಿಸಿದ್ದಾರೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಮಡಿಕೇರಿ ಅರಮನೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ನನ್ನ ನಿರಂತರ ಪ್ರಯತ್ನಕ್ಕೆ ಮಹತ್ವದ ಯಶಸ್ಸು ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಕೊಡಗಿನ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ, ಇದು ಮಹತ್ವದ್ದಾಗಿದ್ದು, ಐತಿಹಾಸಿಕ ಮಡಿಕೇರಿ ಅರಮನೆಯ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲ ದೊರೆತಿದೆ ಎಂದು ತಿಳಿಸಿದ್ದಾರೆ.

ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ತಮ್ಮ ಪತ್ರದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮಡಿಕೇರಿ ಅರಮನೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದಾರೆ. ಇದರ ಭಾಗವಾಗಿ, ಪ್ರವಾಸಿಗರಿಗೆ ಉತ್ತಮ ಅನುಭವ ನೀಡುವ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಡಿಜಿಟಲ್ ಪ್ರದರ್ಶನಗಳನ್ನೊಳಗೊಂಡ ಆಧುನಿಕ ತಾಣ ವಸ್ತುಸಂಗ್ರಹಾಲಯ ಸ್ಥಾಪಿಸುವ ಪ್ರಸ್ತಾವನೆಯೂ ಪರಿಶೀಲನೆಯಲ್ಲಿದೆ. ಇದು ಕೊಡಗಿನ ಸಮೃದ್ಧ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪರಿಣಾಮಕಾರಿಯಾಗಿ ಪರಿಚಯಿಸುವ ಮಹತ್ವದ ಹೆಜ್ಜೆಯಾಗಲಿದೆ ಎಂದು ಯದುವೀರ್ ತಿಳಿಸಿದ್ದಾರೆ.

2025ರ ಮಾರ್ಚ್ 18ರಂದು ಕೇಂದ್ರ ಸರ್ಕಾರಕ್ಕೆ ವಿವರವಾದ ಮನವಿ ಸಲ್ಲಿಸಲಾಗಿತ್ತು. ಆ ಮನವಿಯಲ್ಲಿ ಮಡಿಕೇರಿ ಅರಮನೆಗೆ ಸಂರಕ್ಷಿತ ಸ್ಮಾರಕ ಸ್ಥಾನಮಾನ ನೀಡುವುದು ಹಾಗೂ ಅಲ್ಲಿ ವಸ್ತುಸಂಗ್ರಹಾಲಯ ಸ್ಥಾಪಿಸುವ ಕುರಿತು ಬಲವಾಗಿ ಆಗ್ರಹಿಸಲಾಗಿತ್ತು. ಇದರ ಫಲವಾಗಿ ಈಗಾಗಲೇ ಎಎಸ್ಐನ ಹಿರಿಯ ಅಧಿಕಾರಿಗಳು ಜಿಲ್ಲಾಡಳಿತದ ಸಹಯೋಗದಲ್ಲಿ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಅರಮನೆಯ ಸಂರಕ್ಷಣೆಗಾಗಿ ವಿರೂಪಾಕ್ಷಯ್ಯ ಎಂಬುವವರು ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ, ಹೈಕೋರ್ಟ್ ಆದೇಶದ ಮೇರೆಗೆ ದುರಸ್ತಿ ಕಾರ್ಯ ನಡೆದಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-1922342671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.