ಸೋಮವಾರ, ಮಾರ್ಚ್ 27, 2023
31 °C

ಮಡಿಕೇರಿ: ಸ್ವಾಯತ್ತತೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಎಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್‌ (ಸಿಎನ್‌ಸಿ)ನ ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್‌.ಯು.ನಾಚಪ್ಪ, ‘ಗಣರಾಜ್ಯೋತ್ಸವದ ಅಂಗವಾಗಿ ನಾವು ನಮ್ಮ ಬೇಡಿಕೆಯನ್ನು ಮಂಡಿಸುತ್ತಿದ್ದೇವೆ. ಸರ್ವಶ್ರೇಷ್ಠ ಸಂವಿಧಾನದ ಪ್ರಕಾರವೇ ನಮಗೆ ಭೂ–ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡವರ ಭಾವನೆಗಳನ್ನು ಸರ್ಕಾರ ಗೌರವಿಸಬೇಕು’ ಎಂದು ಆಗ್ರಹಿಸಿದರು.

ಕೊಡವ ಕುಲದ ಧಾರ್ಮಿಕ ಸಂಸ್ಕಾರವಾದ ಕೋವಿ, ತೋಕ್, ಶಸ್ತ್ರಾಸ್ತ್ರ ಹಕ್ಕನ್ನು ಸಿಖ್ ಸಮುದಾಯದ ಕಿರ್ಪಾಣ್ ಮಾದರಿಯಲ್ಲಿ ಪರಿಗಣಿಸಿ, ಸಂವಿಧಾನದ 25 ಮತ್ತು 26ನೇ ವಿಧಿಯನ್ವಯ ವಿಶೇಷ ಖಾತರಿ ನೀಡಬೇಕು. ಕೊಡವ ಸಾಂಸ್ಕೃತಿಕ ಪರಂಪರೆಯನ್ನು ವಿಶ್ವಸಂಸ್ಥೆಯ ಯುನೆಸ್ಕೊದ ಇಂಟ್ಯಾಂಜಿಬಲ್ ಕಲ್ಚರಲ್ ಹೆರಿಟೇಜ್ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಒತ್ತಾಯಿಸಿದರು.

ಈ ಬೇಡಿಕೆಗಳ ಈಡೇರಿಕೆಗೆ ಅನೇಕ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಪರಿಗಣಿಸುತ್ತಿಲ್ಲ. ಆದರೆ, ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು