ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರಂಗಿ ಜಲಾಶಯದ ಒಳ ಹರಿವು 8702 ಕ್ಯುಸೆಕ್‌ಗೆ ಹೆಚ್ಚಳ

Published 22 ಜುಲೈ 2023, 7:19 IST
Last Updated 22 ಜುಲೈ 2023, 7:19 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಧಾರಾಕಾರ ಮಳೆ ಹಾಗೂ ಗಾಳಿ ಮುಂದುವರೆದಿದ್ದು, ಹಾರಂಗಿ ಜಲಾಶಯದ ಒಳ ಹರಿವು ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ 8,702 ಕ್ಯುಸೆಕ್‌ಗೆ ಏರಿಕೆಯಾಗಿದೆ.

2,859 ಗರಿಷ್ಠ ಅಡಿಯ ಜಲಾಶಯದಲ್ಲಿ ಈಗ 2,853.63 ಅಡಿಗಳಷ್ಟು ನೀರಿದೆ. ಜಲಾಶಯ ಗರಿಷ್ಟ ಮಟ್ಟ ತುಂಬಲು ಇನ್ನು ಕೇವಲ 6.5 ಅಡಿಗಳಷ್ಟೇ ಬಾಕಿ ಇದೆ.

ಹವಾಮಾನ ಇಲಾಖೆಯು ಕೊಡಗಿನ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುವ ಮುನ್ನಚ್ಚರಿಕೆ ನೀಡಿರುವುದರಿಂದ ಜಲಾಶಯದ ಅಧಿಕಾರಿಗಳು ಒಳ ಹರಿವಿನ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.

ಈ ಕುರಿತು ‘ಪ‍್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ‘ಜಲಾಶಯದ ಒಳ ಹರಿವು ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ. ಇದೇ ಪ್ರಮಾಣದಲ್ಲಿ ಒಳ ಹರಿವು ಇದ್ದರೆ ನಾಳೆ ಮಧ್ಯಾಹ್ನ ಇಲ್ಲವೇ ಸಂಜೆಯ ಒಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಭಾರಿಯಿಂದ ಅತಿ ಭಾರಿ ಮಳೆಯ ಮುನ್ನಚ್ಚರಿಕೆ ನೀಡಿರುವುದರಿಂದ ಈಗಾಗಲೇ ನದಿ ತೀರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT