ಮಡಿಕೇರಿ: ಇಲ್ಲಿನ ಹೊರವಲಯದ ಕರ್ಣಂಗೇರಿ ಕ್ಷೇತ್ರದ ರಾಜರಾಜೇಶ್ವರಿ ದೇವಾಲಯದಲ್ಲಿ ಮಂಗಳವಾರ ದೇವಿಯ ರಥವನ್ನು ಕಟ್ಟುನಿಟ್ಟಿನಿಂದ ವ್ರತಾಚಾರಣೆ ಮಾಡಿದ್ದ ಭಕ್ತರು ಎಳೆಯುತ್ತಿದ್ದಂತೆ ಅಸಂಖ್ಯಾತ ಭಕ್ತ ಜನರು ಕೈಮುಗಿದರು. ರಥೋತ್ಸವ ದೇವಸ್ಥಾನದ ಆವರಣದ ಸುತ್ತಲೂ ಸಾಗಿ ಬರುತ್ತಿದ್ದಂತೆ, ಭಕ್ತರು ಕೈಮುಗಿದು ರಥೋತ್ಸವದಲ್ಲಿ ಹೆಜ್ಜೆ ಹಾಕಿದರು.

ದೇಗುಲದ ವಾರ್ಷಿಕೋತ್ಸವ ಹಾಗೂ ರಥೋತ್ಸವಕ್ಕೂ ಮುನ್ನ ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥಸ್ನಾನ, ಕಳಸ ಪೂಜೆಗಳು ನಡೆದವು.

ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಸಂಜೆ ದೇವಸ್ಥಾನದ ಆವರಣದಲ್ಲಿ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೀಪಾಲಂಕಾರ ನಡೆಯಿತು.

ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ |ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯೊಂದಿಗೆ ನಡೆಯುವುದರೊಂದಿಗೆ ವಾರ್ಷಿಕೋತ್ಸವ ಸಂಪನ್ನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-50098862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.