ಮಡಿಕೇರಿ: ಇಲ್ಲಿನ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯುಸಿಯ ವಿದ್ಯಾರ್ಥಿಗಳಿಗೆ ಒಟ್ಟು ₹ 40 ಸಾವಿರ ವಿದ್ಯಾರ್ಥಿ ವೇತನವನ್ನು ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ ವಿತರಿಸಿದರು.

ನಗರದ ರೋಟರಿ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರೋಟರಿ ಮೂಲಕ ಸಮಾಜ ಸೇವೆಗಾಗಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ಸೇವೆಯಲ್ಲಿ ಉತ್ಸಾಹ ತೋರಬೇಕು, ಸೇವೆಗಾಗಿ ಇತರರನ್ನೂ ಪ್ರೇರೇಪಿಸಬೇಕು’ ಎಂದು ಕರೆ ನೀಡಿದರು.

ಅಪಾರ ಸಾಮಾಜಿಕ ಕಳಕಳಿಯನ್ನು ಹೊಂದಿರುವ ರೋಟರಿ ಸಂಸ್ಥೆ ರಕ್ತ ಸಂಗ್ರಹ ಘಟಕ ಮತ್ತು ಚರ್ಮಗಳ ಶಿಥಿಲೀಕರಣ ಘಟಕಗಳ ಸ್ಥಾಪನೆಗೆ ಯೋಜನೆ ರೂಪಿಸಿದೆ. ವಿಶ್ವದೆಲ್ಲೆಡೆ ಪೋಲಿಯೋ ಲಸಿಕೆ ಅಭಿಯಾನವನ್ನು ನಿಭಾಯಿಸುವ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದೆ. ತನ್ನ ನಿಸ್ವಾರ್ಥ ಸೇವೆಯ ಮೂಲಕವೇ ರೋಟರಿ ಸಂಸ್ಥೆ ಎಲ್ಲರ ಗಮನ ಸೆಳೆದಿದೆ ಎಂದರು.

ರೋಟರಿಯ ಸಹಾಯಕ ಗವರ್ನರ್ ದಿಲನ್ ಚಂಗಪ್ಪ ಅವರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹೆಚ್ಚಿಸುವ ಕುರಿತು ಮಾಹಿತಿ ನೀಡಿದರು.

ರೋಟರಿ ಸಂಸ್ಥೆಯಲ್ಲಿ ಸುದೀರ್ಘ 50 ವರ್ಷಗಳ ಸೇವೆ ಸಲ್ಲಿಸಿದ ಹಿರಿಯರಾದ ಡಾ.ಮನೋಹರ್ ಜಿ.ಪಾಟ್ಕರ್ ಹಾಗೂ ಅನಂತಸುಬ್ಬರಾವ್ ಅವರನ್ನು ಗೌರವಿಸಲಾಯಿತು.

ಝೋನಲ್ ಲೆಫ್ಟಿನೆಂಟ್ ರೋಟರಿಯನ್ ಕೆ.ಸಿ.ಕಾರ್ಯಪ್ಪ, ರೋಟರಿ ಮಡಿಕೇರಿ ಅಧ್ಯಕ್ಷೆ ಲಲಿತಾ ರಾಘವನ್ ಹಾಗೂ ಕಾರ್ಯದರ್ಶಿ ಬಿ.ಎಂ.ಸೋಮಣ್ಣ ಭಾಗವಹಿಸಿದ್ದರು.