ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ- ಸಂಪಾಜೆ ರಸ್ತೆ: ಕೇಂದ್ರದಿಂದ ₹ 58 ಕೋಟಿ

Last Updated 1 ಜನವರಿ 2020, 10:55 IST
ಅಕ್ಷರ ಗಾತ್ರ

ಮಡಿಕೇರಿ: ಎರಡು ವರ್ಷ ಸತತವಾಗಿ ಸುರಿದ ಭಾರಿ ಮಳೆಗೆ ಉಂಟಾದ ಭೂಕುಸಿತದಿಂದ ತೀವ್ರ ಹಾನಿಯಾಗಿದ್ದ ಮಡಿಕೇರಿ- ಸಂಪಾಜೆ ರಸ್ತೆ (ಎನ್‌ಎಚ್–275) ಯಲ್ಲಿ ತಡೆಗೋಡೆ ಮತ್ತಿತರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ₹ 58.8 ಕೋಟಿ ಮಂಜೂರು ಮಾಡಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕೊಡಗು ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಮನವಿ ಸಲ್ಲಿಸಿದರು. ತಡೆಗೋಡೆ, ಚರಂಡಿ, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ಕಾಮಗಾರಿಗಳು ಶೀಘ್ರವೇ ಆರಂಭಗೊಳ್ಳಲಿವೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT