ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ರಾಜ್ಯದ ಮಂಜುನಾಥ್‌ಗೆ ಸ್ಥಾನ

Last Updated 4 ನವೆಂಬರ್ 2020, 15:51 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಜಿ. ಮಂಜುನಾಥ್ ಅವರು 2019ನೇ ಸಾಲಿನ ಜಾಗತಿಕ ಮಟ್ಟದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಕಾಲೇಜಿನಲ್ಲಿ ಕಳೆದ ಏಳು ವರ್ಷಗಳಿಂದ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಮಂಜುನಾಥ್, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹುಂಚ ಗ್ರಾಮದವರು. ವಿಶ್ವದ ಸುಮಾರು 1.43 ಲಕ್ಷ ವಿವಿಧ ಕ್ಷೇತ್ರಗಳ ವಿಜ್ಞಾನಿಗಳ ಪಟ್ಟಿಯಲ್ಲಿ ಮಂಜುನಾಥ್‌ ಸ್ಥಾನ ಪಡೆದಿದ್ದಾರೆ.

ಯುಎಸ್‍ಎ ಸ್ಟ್ಯಾನ್ಬೋರ್ಡ್ ವಿಶ್ವವಿದ್ಯಾಲಯ ನಡೆಸಿದ ಸಮೀಕ್ಷೆಯಲ್ಲಿ ‘ಅನಲೈಟಿಕಲ್ ಕೆಮೆಸ್ಟ್ರಿ ಮತ್ತು ಎನರ್ಜಿ ಕ್ಷೇತ್ರ’ದಲ್ಲಿ ಸಂಶೋಧನೆ ಮಾಡಿರುವ ಪ್ರಪಂಚದ ಅಗ್ರ ಶೇ 2 ವಿಜ್ಞಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಇದುವರೆಗೂ 93 ಅಂತರರಾಷ್ಟ್ರೀಯ ಸಂಶೋಧನಾ ಲೇಖನ ಪ್ರಕಟಿಸಿದ್ದಾರೆ.

‘ಅಕ್ಟೋಬರ್‌ 16ರಂದು ಈ ಪಟ್ಟಿ ಬಿಡುಗಡೆಯಾಗಿದೆ. ನಾನು ಗ್ರಾಮೀಣ ಪ್ರದೇಶದಿಂದಲೇ ಬಂದವನು. ಪರಿಶ್ರಮಕ್ಕೆ ಜಾಗತಿಕ ಮನ್ನಣೆ ಸಿಕ್ಕಿದ್ದು ಸಂತೋಷ ತಂದಿದೆ. ಪ್ರಾಧ್ಯಾಪಕ ವೃತ್ತಿಗೆ ಬರುವ ಮೊದಲು ಮಲೇಷ್ಯಾದಲ್ಲಿ ವಿಜ್ಞಾನಿಯಾಗಿ ಕೆಲವು ವರ್ಷ ಕೆಲಸ ಮಾಡಿದ್ದೆ’ ಎಂದು ಮಂಜುನಾಥ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT