ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಠ್ಯದಷ್ಟೇ ಕ್ರೀಡೆಗೆ ಮಹತ್ವ ನೀಡಿ: ಕುಶನ್ ರೈ

Published : 12 ಸೆಪ್ಟೆಂಬರ್ 2024, 13:51 IST
Last Updated : 12 ಸೆಪ್ಟೆಂಬರ್ 2024, 13:51 IST
ಫಾಲೋ ಮಾಡಿ
Comments

ನಾಪೋಕ್ಲು: ‘ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವ ಅತಿ ಮುಖ್ಯ’ ಎಂದು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ ಹೇಳಿದರು.

ಸಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಮಡಿಕೇರಿ ತಾಲ್ಲೂಕುಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ‘ಎಲ್ಲರೂ ಶಿಸ್ತಿನಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು’ ಎಂದರು.

ಜ್ಞಾನಜ್ಯೋತಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಕ್ರೀಡಾ ಧ್ವಜಾರೋಹಣ ನೇರವೇರಿಸಿ, ‘ಓದು ಎಷ್ಟು ಮುಖ್ಯವೋ ಕ್ರೀಡೆಯೂ ವಿದ್ಯಾರ್ಥಿಗಳಿಗೆ ಅಷ್ಟೇ ಮುಖ್ಯವಾಗಿದೆ. ಕ್ರೀಡೆಯಲ್ಲಿ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು’ ಎಂದರು.

ಮೂರ್ನಾಡು, ಮಡಿಕೇರಿ, ನಾಪ್ಲೋಕು ಮತ್ತು ಭಾಗಮಂಡಲ ವಲಯದ ಕ್ರೀಡಾಪಟುಗಳಿಂದ ಪಥಸಂಚಲನ ವೀಕ್ಷಿಸಿದ ಕ್ಷೇತ್ರಶಿಕ್ಷಣಾಧಿಕಾರಿ ಬಿ.ಸಿ. ದೊಡ್ಡೇಗೌಡ ಮತ್ತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್. ಗಾಯಿತ್ರಿ ಗೌರವವಂದನೆ ಸ್ವೀಕರಿಸಿದರು. ವಿಜೇತ ಕ್ರೀಡಾಪಟುಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.

ಜ್ಞಾನಜ್ಯೋತಿ ಎಜುಕೇಷನ್ ಸೊಸೈಟಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶೀಲಾ ಅಬ್ದುಲ್ಲಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಟಿ.ಪೂರ್ಣೇಶ್, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮೋಹನ್ ಪೆರಾಜೆ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜಿ.ಅಶೋಕ್, ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಎಂ.ಕಿರಣ್, ಮಡಿಕೇರಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ.ಗುರುರಾಜ್, ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಡುವಂಡ ಬೆಲ್ಲುಚಿಣ್ಣಪ್ಪ, ಕಾರ್ಯದರ್ಶಿ ಬಡುವಂಡ ಬೋಪಣ್ಣ, ಖಜಾಂಚಿ ಎನ್.ಒ.ಮ್ಯಾಥ್ಯು ಉಪಸ್ಥಿತರಿದ್ದರು.

ನಾಪೋಕ್ಲು ಸಮೀಪದ ಮೂರ್ನಾಡಿನಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕ್ಷೇತ್ರಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇಗೌಡ ಮತ್ತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್. ಗಾಯಿತ್ರಿ ಕ್ರೀಡಾಪಟುಗಳಿಂದ ಗೌರವವಂದನೆ ಸ್ವೀಕರಿಸಿದರು.
ನಾಪೋಕ್ಲು ಸಮೀಪದ ಮೂರ್ನಾಡಿನಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕ್ಷೇತ್ರಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇಗೌಡ ಮತ್ತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್. ಗಾಯಿತ್ರಿ ಕ್ರೀಡಾಪಟುಗಳಿಂದ ಗೌರವವಂದನೆ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT