ಮಡಿಕೇರಿ: ನಗರದ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ನಿಯಮಾನುಸಾರ ತ್ವರಿತವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು ತಾಕೀತು ಮಾಡಿದರು.

ಭೂ ಸುರಕ್ಷಾ ಯೋಜನೆ, ಇ-ಪೌತಿ ಖಾತೆ, ದುರಸ್ತಿ ಪ್ರಕರಣ ಇತ್ಯರ್ಥ, ಕೆರೆಗಳ ಸಂರಕ್ಷಣೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಆಗಬೇಕಿರುವ ಕೆಲಸಗಳನ್ನು ಬೇಗ ಪೂರ್ಣಗೊಳಿಸಬೇಕು ಎಂದರು.

ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಚುರುಕಿನಿಂದ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ‘ಸಾರ್ವಜನಿಕರು ಕಂದಾಯ ಇಲಾಖೆಯಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಹೆಚ್ಚು ಗಮನಿಸುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಕರ್ತವ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.