ಮಡಿಕೇರಿ: ನೋಂದಣಿ ಮಾಡಿಸದೇ ಅನಧಿಕೃತವಾಗಿ ಹೋಂ-ಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಲ್ಲಿ ಅಂತಹ ಹೋಂ-ಸ್ಟೇಗಳ ವಿರುದ್ಧ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ಹಾಗೂ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಎಚ್ಚರಿಕೆ ನೀಡಿದ್ದಾರೆ.

ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಅಧಿಕೃತ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪತ್ರ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇ ಮಾಲೀಕರು ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪತ್ರ ಪಡೆದ ನಂತರವೇ ಹೋಂ-ಸ್ಟೇಗಳನ್ನು ನಡೆಸುವಂತೆ ಅವರು ಸೂಚಿಸಿದ್ದಾರೆ.ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಷರತ್ತು ಪಾಲಿಸಲೇಬೇಕು. ಎಲ್ಲಾ ಅಸ್ತಿತ್ವದಲ್ಲಿರುವ ಮತ್ತು ಹೊಸ ಹೋಂಸ್ಟೇಗಳು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಾಯಿತ ಹೋಂಸ್ಟೇಗಳ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ವೆಬ್ಸೈಟ್ನಲ್ಲಿ ಪ್ರದರ್ಶಿಸಲಾಗುತ್ತದೆ.

ಸಮಯದ ಹಂಚಿಕೆಯ ಆಧಾರದ ಮೇಲೆ ಯಾವುದೇ ಕೊಠಡಿಗಳನ್ನು ಬಾಡಿಗೆಗೆ ನೀಡುವಂತಿಲ್ಲ. ಹೋಂ-ಸ್ಟೇ ಪ್ರವೇಶಿಸುವ ಮುಖ್ಯ ದ್ವಾರದಲ್ಲಿ ಅನುಮತಿ ಪತ್ರ ಹಾಗೂ ಪರವಾನಿಗೆ ಪತ್ರಗಳನ್ನು ಪ್ರದರ್ಶಿಸಬೇಕು. ಬಾಡಿಗೆ ಅಥವಾ ಲೀಸ್ ಅಥವಾ ಉಪ ಬಾಡಿಗೆ ಮನೆಗಳನ್ನು ಹೋಂ-ಸ್ಟೇಗಳಾಗಿ ನೋಂದಾಯಿಸಲು ಅವಕಾಶವಿಲ್ಲ. ಹೋಂ-ಸ್ಟೇ ಮಾಲೀಕರು ಕಡ್ಡಾಯವಾಗಿ ಈ ಸ್ಥಳದಲ್ಲಿ ವಾಸವಿರಲೇಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಹೋಂ-ಸ್ಟೇನಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು, ಸಿಸಿಟಿವಿಯು ದಿನದ 24 ಗಂಟೆಗಳ ಕಾಲ ಚಾಲ್ತಿಯಲ್ಲಿರಬೇಕು ಹಾಗೂ 30 ದಿನಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಹಾಗೂ ಸಿಸಿಟಿವಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದ್ದಾರೆ.

ಹೋಂ-ಸ್ಟೇಗೆ ನೇಮಿಸಿಕೊಳ್ಳುವ ಸಿಬ್ಬಂದಿಗಳ ಹಿನ್ನಲೆಯ ಪರಿಶೀಲನೆ ಅನ್ನು ಪೊಲೀಸ್ ಇಲಾಖೆಯ ಮುಖಾಂತರ ಕಡ್ಡಾಯವಾಗಿ ನಡೆಸಬೇಕು. ಅತಿಥಿಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಹೋಂ-ಸ್ಟೇ ಸ್ವಾಗತದಲ್ಲಿ ರಿಜಿಸ್ಟರ್, ದೂರು ರಿಜಿಸ್ಟರ್ ಮತ್ತು ಪ್ರತಿಕ್ರಿಯೆ ಪುಸ್ತಕ ನಿರ್ವಹಿಸಬೇಕು. ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಬಂದಂತಹ ಅತಿಥಿಗಳಿಗೆ ಬೆಳಗ್ಗಿನ ಉಪಹಾರವನ್ನು ನೀಡಬೇಕು. ಸ್ವಚ್ಛತೆ, ಆರೋಗ್ಯ, ನೈರ್ಮಲ್ಯ ಮತ್ತು ಅಗ್ನಿ ಸುರಕ್ಷತೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಹೋಂ-ಸ್ಟೇನಲ್ಲಿ ಅತಿಥಿಗಳು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಪ್ರವಾಸೋದ್ಯಮ ಇಲಾಖೆಯ ಅನುಮೋದನೆ ಅಥವಾ ನೋಂದಣಿ ಇಲ್ಲದೇ ಹೋಂ-ಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದು ಕಾನೂನುಬಾಹಿರವೆಂದು ಪರಿಗಣಿಸಿ ಹೋಂ-ಸ್ಟೇ ಮಾಲೀಕರು ಮತ್ತು ಪ್ರವರ್ತಕರ ವಿರುದ್ಧ ಕೆ.ಟಿ.ಟಿ.ಎಫ್ ಕಾಯ್ದೆ-2015ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-51-2119442125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.