ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 14ರ ನಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ: ಸಚಿವ ಎನ್.ಎಸ್.ಭೋಸರಾಜು

Published 27 ಜೂನ್ 2023, 9:46 IST
Last Updated 27 ಜೂನ್ 2023, 9:46 IST
ಅಕ್ಷರ ಗಾತ್ರ

ಮಡಿಕೇರಿ: ಜುಲೈ 15 ರ ಬಳಿಕ ಕೊಡಗು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.

ಇಲ್ಲಿನ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ವತಿಯಿಂದ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬದಲಾವಣೆ ಆಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸದ್ಯದಲ್ಲೇ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು ಬಳಿಕ ಜಿಲ್ಲೆಯ ಪ್ರವಾಸ ಕೈಗೊಳ್ಳಲಾಗುವುದು ಎಂದರು.

ಮರ, ಗಿಡಗಳನ್ನು ನೆಟ್ಟು ಕೆರೆಗಳನ್ನು ನಿರ್ಮಿಸಿ ಪರಿಸರ ಕಾಪಾಡಿದವರು ಕೆಂಪೇಗೌಡ ಎಂದು ಹೇಳಿದರು.

ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಮಾತನಾಡಿ, ಬೆಂಗಳೂರಿನಲ್ಲಿನ ಕೆರೆಗಳು ಹಾಗೂ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ, 'ಸಣ್ಣ ನೀರಾವರಿ ಸಚಿವರೂ ಆಗಿರುವ ಭೋಸರಾಜು ಅವರು ಕೊಡಗು ಜಿಲ್ಲೆಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT