ಮಡಿಕೇರಿ: ತಾಲ್ಲೂಕಿನ ಕಾಡಂಚಿನ ಗ್ರಾಮ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಸಿಲುಕಿ ದ್ವಿತೀಯ ಪಿಯು ವಿದ್ಯಾರ್ಥಿನಿ ಪೂಜಾ (17) ಮೃತಪಟ್ಟಿದ್ದಾರೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಇರಲಿಲ್ಲ. ವಿದ್ಯಾರ್ಥಿನಿಯ ಮನೆಯ 100 ಮೀಟರ್ ವ್ಯಾಪ್ತಿಯಲ್ಲಿ ಅರಣ್ಯ ಇದೆ. ಒಂಟಿ ಆನೆ ಈ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಡಿಸಿಎಫ್ ಅಭಿಷೇಕ್ ಪ್ರಜಾವಾಣಿಗೆ ತಿಳಿಸಿದರು.

ಕಾಡಾನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬೆಟ್ಟತ್ತೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.