ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಏಪ್ರಿಲ್ ಶೇ 32.65ರಷ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂಬ ಅಂಶ ಇಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯಲ್ಲಿ ವ್ಯಕ್ತವಾಯಿತು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ಅಧಿಕಾರಿಗಳು ಈ ಮಾಹಿತಿ ನೀಡಿದರು.

ಶಕ್ತಿಯೋಜನೆ 2023ರ ಜೂನ್ 11ರಂದು ಆರಂಭವಾಯಿತು. ಅಲ್ಲಿಂದ ಇಲ್ಲಿಯವರೆಗೆ 1.66 ಕೋಟಿ ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 4.02 ಲಕ್ಷ ಹೆಣ್ಣು ಮಕ್ಕಳು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ, ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಸರಾಸರಿ 16,348 ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿದ್ದಾರೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಶೇ 99.1 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಇಲಾಖೆ ಎಂಜಿನಿಯರ್ ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿದ ಧರ್ಮಜ ಉತ್ತಪ್ಪ, ‘ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಜೊತೆಗೆ, ಕೆಎಸ್ಆರ್ಟಿಸಿ ಬಲಪಡಿಸುವಲ್ಲಿಯೂ ಸಹ ಇದೊಂದು ಅತ್ಯುತ್ತಮ ಯೋಜನೆಯಾಗಿದೆ’ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ 3 ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೆಯೇ ಭೂ ಒಡೆತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಗತಿಯತ್ತ ಸಾಗುತ್ತಿದೆ. ಜೊತೆಗೆ, ಬಡ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ತಲುಪುವಂತಾಗಲು ಅಧಿಕಾರಿಗಳ ಕರ್ತವ್ಯ ಮಹತ್ತರವಾದುದು ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ಪಿ.ಆರ್.ಪಂಕಜ, ನಾಸೀರ್, ಸದಸ್ಯರಾದ ಬಿ.ಡಿ.ಅಣ್ಣಯ್ಯ, ಕೆ.ಎಂ.ಬಶೀರ್, ಕೆ.ಎಂ.ಉಸ್ತಪ, ಪಿ.ಎಲ್.ಸುರೇಶ್, ಕೆ.ಜಿ.ಪೀಟರ್, ಕಾಂತರಾಜು, ಮಂದ್ರೀರ ಮೋಹನ್ ದಾಸ್, ಜಾನ್ಸನ್ ಪಿ.ವಿ., ಕಾಳಿಮಾಡ ಪ್ರಶಾಂತ್ ಇತರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಹಲವು ಕುಂದುಕೊರತೆ ಬಗ್ಗೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬೀ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-306599086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.