ಮಡಿಕೇರಿ: ಇಲ್ಲಿನ ಶಿಶು ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಮಂಗಳವಾರ ಮಹಿಳೆಯರ ಸಂಭ್ರಮ ಮೇಳೈಸಿತ್ತು.

ಬರೋಬರಿ 60 ಮಹಿಳೆಯರು ನೃತ್ಯ, ಹಾಡು, ರೂಪಕಗಳು, ರಸಪ್ರಶ್ನೆ, ವಿವಿಧ ಸಂಸ್ಕೃತಿಯ ಉಡುಪುಗಳನ್ನು ತೊಡುವ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಸೇರಿದಂತೆ ಹಲವು ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಗಮನ ಸೆಳೆದರು. ಕಾರ್ಯಕ್ರಮದ ಕೊನೆಯಲ್ಲಿ ಕೊಡವ ವಾಲಗ ನೃತ್ಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಈ ದೃಶ್ಯಗಳು ಕಂಡು ಬಂದಿದ್ದು ಮಹಿಳೋದಯ ಮಹಿಳಾ ಒಕ್ಕೂಟ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ. 150ಕ್ಕೂ ಅಧಿಕ ಮಹಿಳೆಯರು ಇದರಲ್ಲಿ ಭಾಗಿಯಾಗಿದ್ದರು.

ಕೇವಲ ಸಂಭ್ರಮಕ್ಕಷ್ಟೇ ಸೀಮಿತವಾಗದ ಈ ಕಾರ್ಯಕ್ರಮದಲ್ಲಿ ನೊಂದ ಮಹಿಳೆಯರಿಗೆ ಸಿಗುವ ನೆರವಿನ ಮಾಹಿತಿಯನ್ನೂ ನೀಡಲಾಯಿತು. ತುರ್ತು ಸಂದರ್ಭದಲ್ಲಿ ಸಹಾಯವಾಣಿ ಸಂಖ್ಯೆ 112, ಸಂಕಷ್ಟದಲ್ಲಿರುವ ಮಹಿಳೆಯರಿಗೆ 181 ಮಹಿಳಾ ಸಹಾಯವಾಣಿಗೆ ಕರೆ ಮಾಡಬಹುದು. ಇವುಗಳು ಉಚಿತವಾಗಿದ್ದು, ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸುತ್ತದೆ. ಕಾನೂನು ಸೇವಾ ಪ್ರಾಧಿಕಾರದಲ್ಲಿ ನೊಂದ ಮಹಿಳೆಯರಿಗೆ ಉಚಿತ ಕಾನೂನು ಸೇವೆಯೂ ಸಿಗಲಿದೆ ಎಂಬಿತ್ಯಾದಿ ಮಾಹಿತಿಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾಯಾಧೀಶರು, ಅಧಿಕಾರಿಗಳು ಮಹಿಳೆಯರಿಗೆ ನೀಡಿದರು.

ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು, ‘ಪೋಷಕರು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು. ಹಾಗೂ ಅವರು ಬೆಳೆಯಲು ಅವಕಾಶ ನೀಡಬೇಕು’ ಎಂದು ಹೇಳಿದರು.

ಇಂದಿನ ಸಮಾಜದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ರಾಜಕೀಯ, ಕ್ರೀಡೆ ಮತ್ತು ವ್ಯಾಪಾಹರ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರ ಸಾಧನೆಗಳನ್ನು ಗೌರವಿಸುವುದು, ಲಿಂಗ ತಾರತಮ್ಯ ಹೋಗಲಾಡಿಸುವುದು ಮತ್ತು ಸಮಾಜದಲ್ಲಿ ಸಮಾನತೆ ತರುವುದು ಮಹಿಳಾ ದಿನಾಚರಣೆಯ ಮುಖ್ಯ ಉದ್ದೇಶ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಸಿಜೆಎಂ ಆದ ಸಿ.ವೀರಭದ್ರಯ್ಯ ಮಾತನಾಡಿ, ದೇಶದಲ್ಲಿ ಶೇ 20ರಷ್ಟು ಮಹಿಳೆಯರು ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಪುರುಷರಷ್ಟೇ ಮಹಿಳೆಯರಿಗೂ ಕೂಡ ಸಮಾನ ಅವಕಾಶ ಕಲ್ಪಿಸಿದಲ್ಲಿ ಲಿಂಗ ತಾರತಮ್ಯ ದೂರವಾಗುತ್ತದೆ ಎಂದರು.

ಮೈಸೂರು ಒಡಿಪಿ ಯೋಜನಾ ಸಂಯೋಜಕರಾದ ಮೋಲಿ ಪೊಡ್ತಾದೊ ಮಾತನಾಡಿ, ‘ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಗಂಡು ಹೆಣ್ಣು ಎಂದು ತಾರತಮ್ಯ ಮಾಡಬಾರದು. ಲಿಂಗ ತಾರತಮ್ಯ ಕಡಿಮೆ ಆದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದುತ್ತದೆ’ ಎಂದು ಪ್ರತಿಪಾದಿಸಿದರು.

ಮಹಿಳಾ ದಿನವು ಕೇವಲ ಆಚರಣೆಯ ದಿನವಲ್ಲ. ಪ್ರಸ್ತುತ ದಿನಗಳಲ್ಲಿಯೂ ಸಮಾನತೆ, ಸಕ್ಷರತೆ, ಅವಕಾಶ ಮತ್ತು ಸುರಕ್ಷತೆಗಾಗಿ ಹೋರಾಟ ಮುಂದುರೆಯುತ್ತಿದೆ. ಮಹಿಳೆಯರು ಸಮಾನತೆ ಮತ್ತು ಗೌರವಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.

ಮೈಸೂರು ಒಡಿಪಿ ಸಂಸ್ಥೆಯ ಸಹಾಯಕ ನಿರ್ದೇಶಕ ಫಾದರ್ ಜಾನ್ ಫೆರ್ನಾಂಡಿಸ್ ಮಾತನಾಡಿ, ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದರೆ ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸ್ಮರಿಸುವ ದಿನ. ಮಹಿಳಾ ಸಾಧನೆಯನ್ನು ಗುರುತಿಸುವ ದಿನ’ ಎಂದರು.

ನಗರಸಭೆ ಅಧ್ಯಕ್ಷೆ ಪಿ.ಕಲಾವತಿ ಮಾತನಾಡಿ, ಅತ್ತೆಯನ್ನು ತಾಯಿಯಾಗಿ ನೋಡಬೇಕು. ಪೋಷಕರು ಹೆಣ್ಣು ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಲಹೆಗಳನ್ನು ನೀಡಿ ಬೆಳೆಸಬೇಕು. ದೊಡ್ಡವರನ್ನು ಗೌರವಿಸುವ ಕೆಲಸವನ್ನು ಮಾಡಬೇಕು. ಆಗ ಕುಟುಂಬ ಒಗ್ಗಟ್ಟಿನಿಂದ ಇರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಒಡಿಪಿ ಒಕ್ಕೂಟದ ಮಾಜಿ ಅಧ್ಯಕ್ಷೆ ಜುಲೆಕಾಬಿ, ಕಾರ್ಯಕರ್ತೆ ವಿಜಯ ನಾರಾಯಣ, ಜಯಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದಮಯಂತಿ, ಮಹಿಳೋದಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲಲಿತಾ, ಸದಸ್ಯರಾದ ನೀಮಾ, ಹೀನ, ಹಸೀನಾ, ಲೂಸಿ ಜೇಮ್ಸ್, ಮೀನಾ ಕುಮಾರಿ, ರೇಣು ಕುಮಾರಿ, ಮಮತಾ, ಸಿಬ್ಬಂದಿ ಸಿ.ಎಸ್.ಅಕ್ಷಯ್, ಕಾನೂನು ಪ್ರಾಧಿಕಾರದ ಸಿಬ್ಬಂದಿ ಜಯಪ್ಪ, ಹಸ್ತ ಸಂಘದ ಅಧ್ಯಕ್ಷೆ ಸರಿತಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-841087747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.