ಭಾನುವಾರ, ಏಪ್ರಿಲ್ 2, 2023
32 °C

ಮಡಿಕೇರಿ: ಗಾಂಧೀಜಿ ಚಿತಾಭಸ್ಮ ಮೆರವಣಿಗೆ, ಸರ್ವಧರ್ಮ ಪ್ರಾರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಮಡಿಕೇರಿ: ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನದ ಪ್ರಯುಕ್ತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಸೋಮವಾರ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.

ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಇದ್ದ ಚಿತಾಭಸ್ಮವನ್ನು  ಪೊಲೀಸ್ ಗೌರವ ರಕ್ಷೆಯೊಂದಿಗೆ ಮೆರವಣಿಗೆಯಲ್ಲಿದ್ದ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಗಾಂಧಿ ಮೈದಾನಕ್ಕೆ ತರಲಾಯಿತು.

ಚಿತಾಭಸ್ಮವನ್ನು ಗಾಂಧಿ ಮಂಟಪದಲ್ಲಿರಿಸಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು. ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಯಿತು‌.

ಪೊಲೀಸ್ ವಾದ್ಯ ವೃಂದದವರ ವಾದನದ ಜತೆಗೆ ಪೊಲೀಸ್ ತಂಡವು ಗೌರವ ವಂದನೆ ಸಲ್ಲಿಸಿತು.

ನಂತರ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿ ಗಾಂಧಿ ಅವರನ್ನು ಸ್ತುತಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು