ಮಡಿಕೇರಿ: ಇಲ್ಲಿನ ಕೋಟೆ ಸಮೀಪದ ಗೋಡೌನ್ವೊಂದರಲ್ಲಿ ದೇವಜನ ಜಗದೀಶ್ (56) ಎಂಬುವವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಇವರು ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿ ವಾಹನಗಳ ಬಿಡಿಭಾಗಗಳನ್ನು ಮಾರಾಟ ಮಾಡುವ ಅಂಗಡಿ ನಡೆಸುತ್ತಿದ್ದರು. ವ್ಯಾಪಾರದಲ್ಲಿ ಕುಸಿತ ಉಂಟಾಗಿ ಸಾಲ ಹೆಚ್ಚಾಗಿದ್ದರಿಂದ ಅವರು ಬೇಸರಗೊಂಡಿದ್ದರು. ಶುಕ್ರವಾರ ಸಂಜೆ ಅವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡರು’ ಎಂದು ಪೊಲೀಸರು ತಿಳಿಸಿದ್ದಾರೆ.

ಇವರ ಆತ್ಮಹತ್ಯೆಗೆ ಮೈಕ್ರೊ ಫೈನಾನ್ಸ್ ಕಿರುಕುಳ ಕಾರಣ ಎಂಬ ಸುದ್ದಿ ವಾಟ್ಸ್ಆ್ಯಪ್ನಲ್ಲಿ ಹರಿದಾಡಿತ್ತು. ಈ ಕುರಿತು ‘ಪ್ರಜಾವಾಣಿ’ಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಸಂಪರ್ಕಿಸಿದಾಗ ಅವರು, ‘ಮೈಕ್ರೋ ಫೈನಾನ್ಸ್ ಕಿರುಕುಳ ಇತ್ತು ಎಂದು ಮೃತರ ಸಂಬಂಧಿಕರು ದೂರು ನೀಡಿಲ್ಲ. ಅನಾರೋಗ್ಯ, ಆರ್ಥಿಕ ತೊಂದರೆ, ವ್ಯಾಪಾರ ನಷ್ಟದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.