ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುಂಟಿಕೊಪ್ಪ | ಹಾರಂಗಿ ಹಿನ್ನೀರಿನಲ್ಲಿ ಮುಳುಗಿದ ವ್ಯಕ್ತಿ

Published 30 ಜೂನ್ 2024, 14:37 IST
Last Updated 30 ಜೂನ್ 2024, 14:37 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದ ಮೈಸೂರಿನ ಶಶಿ (30) ಎಂಬುವವರು ಆಕಸ್ಮಿಕವಾಗಿ ಇಲ್ಲಿನ ಹೆರೂರು ಬಳಿಯ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ.

ಮೈಸೂರಿನಿಂದ 10 ಮಂದಿಯ ತಂಡವು ಕೊಡಗಿಗೆ ಪ್ರವಾಸಕ್ಕೆಂದು ಬಂದಿತ್ತು. ಈ ನಡುವೆ ಹಾರಂಗಿ ಹಿನ್ನೀರು ಪ್ರದೇಶ ಹೆರೂರಿಗೆ ಅವರು ಭೇಟಿ ನೀಡಿದ್ದರು. ಈ ವೇಳೆ ಶಶಿ ಎಂಬುವವರು ನೀರಿಗೆ ಇಳಿದಾಗ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಇವರಿಗಾಗಿ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT