ಗುರುವಾರ , ಮಾರ್ಚ್ 23, 2023
32 °C

ಲಾಡ್ಜ್‌ನಲ್ಲಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿರಾಜಪೇಟೆ: ಮದುವೆ ಸಮಾರಂಭಕ್ಕೆ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಟ್ಟಣದ ಲಾಡ್ಜ್‌ನಲ್ಲಿ ಗುರುವಾರ  ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ಕೃಷ್ಣಪ್ಪ ಅವರ ಪುತ್ರ ಮಧು (33) ಮೃತ ವ್ಯಕ್ತಿ.

‘ಸಮೀಪದ ಚೆಂಬೆಬೆಳ್ಳೂರು ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಮಧು ಅವರು ಮೂವರು ಸ್ನೇಹಿತರೊಂದಿಗೆ ಜೂ.30 ರಂದು ಬಂದಿದ್ದರು. ಅದೇ ದಿನ ಸಂಜೆ ವಿವಾಹ ಸಮಾರಂಭ ಮುಗಿಸಿಕೊಂಡು ರಾತ್ರಿ ಪಟ್ಟಣದ ದೊಡ್ಡಟ್ಟಿ ಚೌಕಿ ಬಳಿಯಿರುವ ಲಾಡ್ಜ್‌ನಲ್ಲಿ ನಾಲ್ವರು ತಂಗಿದ್ದರು. ಗುರುವಾರ ಬೆಳಿಗ್ಗೆ ಮಧು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಹರಿಪ್ರಸಾದ್ ಎಂಬುವವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಮಹಜರು ನಡಸಿ ಕ್ರಮ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.