ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಗೆ ಅತಿಥಿ ಉಪನ್ಯಾಸಕರ ಮನವಿ

Last Updated 26 ಅಕ್ಟೋಬರ್ 2018, 13:20 IST
ಅಕ್ಷರ ಗಾತ್ರ

ಮಡಿಕೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘವು ಈಚೆಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿತು.

ಮಡಿಕೇರಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದಿರುವ ಅತಿಥಿ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಪನ್ಯಾಸಕರಿಗೆ ಈಗಾಗಲೇ ನೀಡುತ್ತಿರುವ ಮಾಸಿಕ ₹ 11 ಸಾವಿರ ಸಾಲದು. ಅದನ್ನು ₹30 ಸಾವಿರಕ್ಕೆ ಏರಿಸಬೇಕು. ವೇತನವನ್ನು ಪ್ರತಿ ತಿಂಗಳ ಮೊದಲ ವಾರದಲ್ಲಿ ಪಾವತಿಸಬೇಕು. ಜತೆಗೆ, ಸೇವಾ ಭದ್ರತೆ ಒದಗಿಸಬೇಕು ಎಂದು ಸಂಘದ ಅಧ್ಯಕ್ಷ ಎಂ.ಎ.ಶ್ಯಾಂ ಪ್ರಸಾದ್ ಅವರು ಮುಖ್ಯಮಂತ್ರಿ ಅವರಲ್ಲಿ ಕೋರಿದರು.

ಕೊಡಗು ಜಿಲ್ಲೆಯ ಎಲ್ಲಾ ಕಾಲೇಜುಗಳ ಸೆಮಿಸ್ಟರ್‌ ಉತ್ತರ ಪತ್ರಿಕೆಯ ಮೌಲ್ಯ ಮಾಪನದ ಕೇಂದ್ರವನ್ನು ಮಡಿಕೇರಿ ಅಥವಾ ಚಿಕ್ಕಅಳುವಾರದ ಸ್ನಾತಕೋತ್ತರ ಕೇಂದ್ರದಲ್ಲಿ ತೆರೆಯಬೇಕು ಎಂದೂ ಮನವಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT