ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಬೀರುಗ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು

Published 15 ಏಪ್ರಿಲ್ 2024, 3:25 IST
Last Updated 15 ಏಪ್ರಿಲ್ 2024, 3:25 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು): ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದಲ್ಲಿ ಸೋಮವಾರ ಮುಂಜಾನೆ ಅಯ್ಯಮಾಡ ಮಾದಯ್ಯ(50) ಎಂಬುವವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ರಸ್ತೆಯಲ್ಲಿ ಅವರು ನಡೆದುಕೊಂಡು ಹೋಗುವಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಶ್ರೀಮಂಗಲದ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಅರವಿಂದ್ ತಿಳಿಸಿದ್ದಾರೆ.

ನಿರಂತರವಾಗಿ ಹೆಚ್ಚುತ್ತಿರುವ ಕಾಡಾನೆ ದಾಳಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ತೆರಳಿದ್ದಾರೆ.

ಇದೇ ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆ ಸಂಚರಿಸುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT