ಮಡಿಕೇರಿ: ‘ಅರೆಭಾಷೆ ಗ್ರಾಮೋತ್ಸವ’ವು ಮೇ, 26 ರಂದು ಬೆಳಿಗ್ಗೆ 9.30ಕ್ಕೆ ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮರಗೋಡು ಗೌಡ ಸಮಾಜದ ವತಿಯಿಂದ ನಡೆಯುವ ಕಾರ್ಯಕ್ರಮದ ಮೆರವಣಿಗೆಗೆ ಮರಗೋಡು ಗೌಡ ಸಮಾಜದಲ್ಲಿ ಸಮಾಜದ ಅಧ್ಯಕ್ಷರಾದ ಕಟ್ಟೆಮನೆ ಜನಾರ್ದನ ಅವರು ಚಾಲನೆ ನೀಡಲಿದ್ದಾರೆ. ವೇದಿಕೆ ಕಾರ್ಯಕ್ರಮವನ್ನು ಬೆಳಿಗ್ಗೆ 10.30ಕ್ಕೆ ಶಾಸಕ ಡಾ.ಮಂತರ್ಗೌಡ ಹಾಗೂ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ.

ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ನಿವೃತ್ತ ಪ್ರಾಂಶುಪಾಲ ಡಾ.ಚೆರಿಯಮನೆ ರಾಮಚಂದ್ರ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ದಾಸ್, ಮರಗೋಡು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಾಂಗೀರ ಸತೀಶ್, ಮೈಸೂರು ಗೌಡ ವಿದ್ಯಾಸಂಘದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಬೆಂಗಳೂರು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ, ಮರಗೋಡು ಗೌಡ ಸಮಾಜದ ಮಾಜಿ ಅಧ್ಯಕ್ಷ ದೇವಜನ ನಾಣಯ್ಯ ಪಾಲ್ಗೊಳಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಮಾಜ ಸೇವಕ ಚೆರಿಯಮನೆ ರತ್ನಕುಮಾರ, ಕಾಫಿ ಬೆಳೆಗಾರ ಪಾಣತಲೆ ದೇವಯ್ಯ ಉದ್ಘಾಟಿಸಲಿದ್ದಾರೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-146074719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.