ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

5 ಕಿ.ಮೀ ಮ್ಯಾರಥಾನ್‌ನಲ್ಲಿ 83 ಮಂದಿ ಭಾಗಿ

ಹಸಿರು ನಿಶಾನೆ ತೋರಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ
Published 1 ಸೆಪ್ಟೆಂಬರ್ 2024, 2:59 IST
Last Updated 1 ಸೆಪ್ಟೆಂಬರ್ 2024, 2:59 IST
ಅಕ್ಷರ ಗಾತ್ರ

ಮಡಿಕೇರಿ: ನಗರದಲ್ಲಿ ಶನಿವಾರ ಬೆಳಿಗ್ಗೆ ಮುಸುಕಿದ್ದ ಮಂಜಿನ ನಡುವೆ ದಾರಿಯ ಹುಡುಕಿಕೊಂಡ ಯುವಕ, ಯುವತಿಯರ ತಂಡ ಹೆಜ್ಜೆ ಹಾಕಿತು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ 83 ವಿದ್ಯಾರ್ಥಿಗಳೊಂದಿಗೆ ಸಾರ್ವಜನಿಕರೂ ಈ ಮ್ಯಾರಥಾನ್‌ನಲ್ಲಿ ಭಾಗಿಯಾಗಿ ಖುಷಿಪಟ್ಟರು.

ಯುವಜನೋತ್ಸವ ಎಚ್.ಐ.ವಿ, ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಎಚ್.ಐ.ವಿ, ಏಡ್ಸ್ ಜಾಗೃತಿಗಾಗಿ ಶನಿವಾರ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ ಈ ದೃಶ್ಯಗಳು ಕಂಡು ಬಂದವು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ 5 ಕಿ.ಮೀ ದೂರದ ಮ್ಯಾರಥಾನ್ ಸ್ಪರ್ಧೆಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹಸಿರು ನಿಶಾನೆ ತೋರಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಮುರಳಿಧರ್ ಅಂಥೋನಿ ಡಿಸೋಜ, ಮಹಾಬಲ, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತರಬೇತುದಾರರಾದ ಬಿಂದ್ಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ಯೋತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸುನೀತಾ ಮುತ್ತಣ್ಣ, ಜಿಲ್ಲಾ ಮೇಲ್ವಿಚಾರಕರು, ಕಮಲ, ಉಷಾ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಾನ್ಸ್ ಕಾಂಪೌಂಡ್, ಮಡಿಕೇರಿಯಿಂದ ಪ್ರಾರಂಭವಾಗಿ, ನಗರದ ಪ್ರಮುಖ ಬೀದಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸರ್ಕಲ್, ಜನರಲ್ ತಿಮ್ಮಯ್ಯ ಸರ್ಕಲ್ (ಜಿ.ಟಿ ಸರ್ಕಲ್) ಮುಖಾಂತರ ಹಾದು ಜನರಲ್ ತಿಮ್ಮಯ್ಯ ಕ್ರೀಡಾಂಗಣವನ್ನು ತಲುಪಿತು. ಮ್ಯಾರಾಥಾನ್ ಸಂಚರಿಸುವ ಮಾರ್ಗದಲ್ಲಿ, ಆಟೊ ಪ್ರಚಾರದ ಮುಖಾಂತರ ಎಚ್.ಐ.ವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲಾಯಿತು.

ವಿಜೇತರ ವಿವರ– ಬಾಲಕರ ವಿಭಾಗ: ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಎಸ್.ಗೌತಮ್ (ಪ್ರಥಮ), ವಿರಾಜಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎಂ.ಎಚ್.ಪ್ರತಾಪ್ (ದ್ವಿತೀಯ), ಸೋಮವಾರಪೇಟೆ ಸೆಂಟ್ ಜೋಸೆಫ್‌ನ ದೀಪಕ್ ಎಸ್.ಯು (ತೃತೀಯ) ಹಾಗೂ ವಿರಾಜಪೇಟೆ ಕಾವೇರಿ ಕಾಲೇಜಿನ ತಕ್ಷಕ್ ಬಿದ್ದಪ್ಪ, ಗೋಣಿಕೊಪ್ಪ ಕಾವೇರಿ ಕಾಲೇಜಿನ ಗೌತಮ್ ಪಿ.ಸಿ., ವಿರಾಜಪೇಟೆ ಕಾವೇರಿ ಕಾಲೇಜಿನ ರೋಶನ್ ಉತ್ತಪ್ಪ ಮತ್ತು ಮಡಿಕೇರಿ ಎಫ್‍ಎಂಸಿ ಕಾಲೇಜಿನ ಪೃಥ್ವೀಶ್ ಎಂ.ಆರ್ ಅವರು ಸಮಾಧಾನಕರ ಬಹುಮಾನ ಪಡೆದುಕೊಂಡರು.

ಬಾಲಕಿಯರ ವಿಭಾಗ: ಪೊನ್ನಂಪೇಟೆ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿನ ಕೆ.ಟಿ.ಚೋಂದಮ್ಮ (ಪ್ರಥಮ), ಮಡಿಕೇರಿ ಎಫ್‍ಎಂಸಿ ಕಾಲೇಜಿನ ನಿಲಿಶಾ ಜೋಜೋ (ದ್ವಿತೀಯ), ಸೋಮವಾರಪೇಟೆ ಸಂತ ಜೋಸೆಫ್ ಶಾಲೆಯ ಕೆ.ವೈ.ಐಶ್ವರ್ಯ (ತೃತೀಯ) ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎಚ್.ಎಸ್.ಮೌನ, ಮಡಿಕೇರಿ ಎಫ್‍ಎಂಸಿ ಕಾಲೇಜಿನ ಕೆ.ಆರ್.ಭೂಮಿಕಾ, ವಿರಾಜಪೇಟೆ ಕಾವೇರಿ ಕಾಲೇಜಿನ ಎನ್.ಆರ್.ಕಾವ್ಯಾ ಮತ್ತು ಮಡಿಕೇರಿ ಪ್ರಥಮದರ್ಜೆ ಕಾಲೇಜಿನ ಬಿ.ಎಂ.ಮೇಘನಾ ಅವರು ಸಮಾಧಾನಕರ ಬಹುಮಾನ ಪಡೆದುಕೊಂಡರು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳಾದ, ಗೌತಮ್. ಎಸ್ ಮತ್ತು ಚೋಂದಮ್ಮ ಕೆ.ಟಿ ಇವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಮ್ಯಾರಾಥಾನ್ ಸ್ಪರ್ಧೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ‌ ಅವರು ಹಸಿರು ನಿಶಾನೆ ತೋರಿದರು
ಮ್ಯಾರಾಥಾನ್ ಸ್ಪರ್ಧೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ‌ ಅವರು ಹಸಿರು ನಿಶಾನೆ ತೋರಿದರು
ಮ್ಯಾರಾಥಾನ್ ಸ್ಪರ್ಧೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹಸಿರು ನಿಶಾನೆ ತೋರಿದರು.
ಮ್ಯಾರಾಥಾನ್ ಸ್ಪರ್ಧೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹಸಿರು ನಿಶಾನೆ ತೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT