ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿರಾಜಪೇಟೆ: ಹುತಾತ್ಮ ಯೋಧರಿಗೆ ಗೌರವ ನಮನ

Published : 26 ಸೆಪ್ಟೆಂಬರ್ 2024, 4:47 IST
Last Updated : 26 ಸೆಪ್ಟೆಂಬರ್ 2024, 4:47 IST
ಫಾಲೋ ಮಾಡಿ
Comments

ವಿರಾಜಪೇಟೆ: ಇಲ್ಲಿನ ಕೊಡಗು ಮಾಜಿ ಸೈನಿಕರ ಸಹಕಾರ ಸಂಘದಿಂದ ಬುಧವಾರ ಹುತಾತ್ಮರ ದಿನವನ್ನು ಆಚರಿಸಲಾಯಿತು.

ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದ ಬಳಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಹುತಾತ್ಮರ ದಿನಾಚರಣೆ ಅಂಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿ ಚೆನ್ನಕೇಶವ ನೇತೃತ್ವದಲ್ಲಿ ಮೀಸಲು ಪಡೆಯ ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭ ಮಹಾವೀರ ಚಕ್ರ ಪಡೆದ ಕರ್ನಲ್ ಪುಟ್ಟಿಚಂಡ ಗಣಪತಿ, ಮಡಿಕೇರಿಯ ಗೋಲ್ಡನ್ ಫಾಮ್ ಕ್ಯಾಂಟಿನ್ ವ್ಯವಸ್ಥಾಪಕ ಲೆಫ್ಟಿನೆಂಟ್ ಕರ್ನಲ್ ಮುಲ್ಲೆರ ಕಾವೇರಪ್ಪ, ಗ್ರೇಡ್ 2 ತಹಶೀಲ್ದಾರ್ ಪ್ರದೀಪ್ ಕುಮಾರ್, ಕೆ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಡಿ.ವೈ.ಎಸ್.ಪಿ ಮೋಹನ್ ಕುಮಾರ್, ಸಿ.ಪಿ.ಐ ಶಿವರುದ್ರ, ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ, ಉಪಾಧ್ಯಕ್ಷ ರಾಜ ಚಂದ್ರಶೇಖರ್, ಕಾರ್ಯದರ್ಶಿ ಪುಗ್ಗೆರ ನಂದ, ಖಜಾಂಚಿ ತೋರೆರ ಪೂವಯ್ಯ, ನಿರ್ದೇಶಕ ಅಣ್ಣಳಮಾಡ ಸುಬ್ಬಯ್ಯ, ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಸೇರಿದಂತೆ ಕೊಡವ ಮುಸ್ಲಿಂ ಅಸೋಸಿಯೇಷನ್, ಮಲಯಾಳಿ ಸಮಾಜ, ಕಾವೇರಿ ಲಘು ವಾಹನ ಚಾಲಕರ ಮತ್ತು ಮಾಲೀಕರ ಸಂಘ, ಕರ್ನಾಟಕ ಸಂಘ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಹಿಂದೂ ಮಲಯಾಳಿ ಸಮಾಜ, ವಿರಾಜಪೇಟೆ ಗೋಲ್ಡನ್ ಫಾರಂ, ಪುರಸಭೆ, ರೋಟರಿ, ಕಾವೇರಿ, ತ್ರಿವೇಣಿ, ಸಂತ ಅನ್ನಮ್ಮ ಶಾಲೆ, ಮಾಜಿ ಸೈನಿಕರು ಸೇರಿದಂತೆ ಸಾರ್ವಜನಿಕರು ಉಪಸ್ಥಿರಿದ್ದರು.

ಕಾರ್ಯಕ್ರಮದಲ್ಲಿ ಕರ್ನಲ್ ಪುಟ್ಟಿಚಂಡ ಗಣಪತಿ ಅವರು ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು
ಕಾರ್ಯಕ್ರಮದಲ್ಲಿ ಕರ್ನಲ್ ಪುಟ್ಟಿಚಂಡ ಗಣಪತಿ ಅವರು ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT