ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ | ಸಾಮೂಹಿಕ ಸತ್ಯನಾರಾಯಣ ಪೂಜೆ

Published 18 ಡಿಸೆಂಬರ್ 2023, 5:41 IST
Last Updated 18 ಡಿಸೆಂಬರ್ 2023, 5:41 IST
ಅಕ್ಷರ ಗಾತ್ರ

ವಿರಾಜಪೇಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್, ವಿರಾಜಪೇಟೆ ವಲಯ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಕೆದಮುಳ್ಳೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮೀಪದ ತೋಮರ ಸಮುದಾಯ ಭವನದಲ್ಲಿ ಈಚೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಪೂಜಾ ಸಮಿತಿಯ ಅಧ್ಯಕ್ಷ ಅರುಣ ಕೆ.ಎಸ್ ವಹಿಸಿದ್ದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಬಸವರಾಜು ಕೆ ಅವರು ಮಾತನಾಡಿ ಸಂಸ್ಕೃತಿ, ಧಾರ್ಮಿಕ ಆಚರಣೆಯ ಮಹತ್ವ, ಧರ್ಮ ಕಾರ್ಯಗಳಿಂದಾಗುವ ಒಳಿತುಗಳ ಬಗ ಉಪನ್ಯಾಸ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯ ವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು, ವಿಮಾ ಕಾರ್ಯಕ್ರಮ, ವಿಪತ್ತು ನಿರ್ವಹಣೆ ಕಾರ್ಯಕ್ರಮ, ಮಾಶಾಸನ, ನಮ್ಮೂರು ನಮ್ಮ ಕೆರೆ, ಜನ ಮಂಗಲ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಳೇಟಿರ ಜಫ್ರಿ ಉತ್ತಪ್ಪ, ತೋರ ಗ್ರಾಮದ ಪ್ರಗತಿಪರ ಕೃಷಿಕ ಕೆ.ಡಿ. ಪ್ರಭು ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಿನೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮೀನಾಕ್ಷಿ, ಜಯಂತಿ, ಕೆ.ಎಂ. ರಾಮಯ್ಯ, ವಿರಾಜಪೇಟೆ ವಲಯ ಮೇಲ್ವಿಚಾರಕ ನಾಗರಾಜ್, ವಿಜಯ ಕುಮಾರ್, ಸುನಿತಾ, ತೇಜಸ್ವಿನಿ  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT