ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಹರ್ಷ ಹತ್ಯೆ ಖಂಡಿಸಿ ಬೃಹತ್‌ ಪ್ರತಿಭಟನೆ

Last Updated 23 ಫೆಬ್ರುವರಿ 2022, 7:48 IST
ಅಕ್ಷರ ಗಾತ್ರ

ಮಡಿಕೇರಿ: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆ ಖಂಡಿಸಿ ಮಡಿಕೇರಿಯಲ್ಲಿ ಬುಧವಾರ ಹಿಂದೂ ಜಾಗರಣಾ ವೇದಿಕೆ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದ ಕಾರ್ಯಕರ್ತರು ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಅಲ್ಲಿಂದ ಮೆರವಣಿಗೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿಎಚ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ, ಮುಖಂಡರಾದ ಮನು, ರಮೇಶ್‌ ಮೊದಲಾದವರು ಹಾಜರಿದ್ದರು. ಜಿಲ್ಲೆಯಲ್ಲಿ ವಿವಿಧೆಡೆಯಿಂದ ಕಾರ್ಯಕರ್ತರು ಬಂದಿದ್ದರು. ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT